ಮೈಸೂರು: ಮುಸ್ಲಿಮರು, ಕ್ರಿಶ್ಚಿಯನ್ನರ ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಬೋರ್ಡ್ ಇದೆ. ಇದೇ ರೀತಿಯ ಬೋರ್ಡ್ ಹಿಂದೂಗಳಿಗೂ ಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ದೇವಾಲಯಗಳನ್ನು ಮುಜರಾಯಿ ಇಲಾಖೆಯಿಂದ ಕೈಬಿಡುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟ್ ಬ್ಯಾಂಕ್ ಓಲೈಕೆಗಾಗಿ ಕಾಂಗ್ರೆಸ್‌ನಿಂದ ವಿರೋಧ ವ್ಯಕ್ತವಾಗುತ್ತಿದೆ. ಇದು ರಾಜಕೀಯ ಕಾರಣಕ್ಕಾಗಿ ಮಾಡುತ್ತಿರುವ ವಿರೋಧವಾಗಿದೆ. ಕಾಂಗ್ರೆಸ್‌ನವರದ್ದು ಯಾವಾಗಲೂ ರಾಜಕೀಯ ಲೆಕ್ಕಾಚಾರವಾಗಿದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನುಡಿದಂತೆ ನಡೆಯುವ ವ್ಯಕ್ತಿಯಾಗಿದ್ದಾರೆ. ನಾವು ಬಿಲ್ ತಂದೇ ತರುತ್ತೇವೆ ಎಂದರು.
Advertisement
Advertisement
2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕಾಯ್ದೆಗಳನ್ನು ಹಿಂಪಡೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದವರು ಕನಸು ಕಾಣುತ್ತಿದ್ದಾರೆ. 2023ರವರೆಗೂ ಕನಸು ಕಾಣಲು ಯಾವುದೇ ಅಭ್ಯಂತರ ಇಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು
Advertisement
Advertisement
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಮಾತನಾಡಿ, ಸಿಎಂ ಬದಲಾವಣೆ ಆಗುವುದಿಲ್ಲ. ಆದರೆ ಸಂಕ್ರಾಂತಿ ನಂತರ ಕ್ರಾಂತಿಯಾಗಲಿದೆ. ಸಂಘಟನೆ ಅಭಿವೃದ್ಧಿ ವಿಚಾರವಾಗಿ ಕ್ರಾಂತಿಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವುದು ಸಂತಸದ ವಿಚಾರ: ಸಿದ್ದಗಂಗಾ ಶ್ರೀ