ಬೆಂಗಳೂರು: ರಾಜ್ಯದಲ್ಲಿ ಈಗ ಇರುವ ಕೆಟ್ಟ ಸರ್ಕಾರವನ್ನು ತೆಗೆಯಲು ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಒಳ್ಳೆಯದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ.
ಜೆಪಿ ನಗರದ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯವರ (H.D Kumaraswamy) ಆರೋಗ್ಯ ವಿಚಾರಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮ ಕಾಯ್ತಿದ್ದಾನೆ: ಯೋಗಿ ಆದಿತ್ಯನಾಥ್
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಅದನ್ನು ಸ್ವಾಗತಿಸುತ್ತೇನೆ. ಆದಷ್ಟು ಮೈತ್ರಿ ಆದರೆ ಒಳ್ಳೆಯದು. ರಾಜ್ಯದಲ್ಲಿ ಇರುವ ಇಂತಹ ಕೆಟ್ಟ ಸರ್ಕಾರ ತೆಗೆಯಲು ಮೈತ್ರಿ ಒಂದು ಮಾರ್ಗವಾಗಿದೆ. ಕುಮಾರಸ್ವಾಮಿಯವರು ಈ ಸರ್ಕಾರದ ವಿರುದ್ಧ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿ ಆದರೆ ಎರಡು ಪಕ್ಷಗಳಿಗೂ ಶಕ್ತಿ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಮ್ಮಿಶ್ರ ಸರ್ಕಾರ ಕೆಡವಿದಂತೆ ಕಾಂಗ್ರೆಸ್ ಸರ್ಕಾರ ಕೆಡವುತ್ತೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ, ಇಲ್ಲಿ ಹೇಳಿ ಅದನ್ನೆಲ್ಲ ಮಾಡಲು ಆಗುವುದಿಲ್ಲ. ಈಗ ಈ ವಿಚಾರವಾಗಿ ಏನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಂದಿನಿಂದ 5 ದಿನ ಸಂಸತ್ ವಿಶೇಷ ಅಧಿವೇಶನ
Web Stories