ಯಡಿಯೂರಪ್ಪನವರನ್ನು ಸೈಡ್‍ಲೈನ್ ಮಾಡಿದ್ರು ಎನ್ನುವುದು ಸುಳ್ಳು: ರೇಣುಕಾಚಾರ್ಯ

Public TV
1 Min Read
renukacharya 2 1

ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿದರು, ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸೈಡ್ ಲೈನ್‍ಮಾಡಿದರು ಎನ್ನುವುದು ಸುಳ್ಳು. ಮುಖ್ಯಮಂತ್ರಿಯಾಗಿದ್ದರಿಂದ ಸಹಜವಾಗಿಯೇ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಜವಾಗಿ ಮುಖ್ಯಮಂತ್ರಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದ್ದರಿಂದ ಅಮಿತ್ ಶಾ ಅವರೂ ಹೇಳಿದ್ದಾರೆ. ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿದರು, ಜಗದೀಶ್ ಶೆಟ್ಟರ್ ಅವರನ್ನು ಲೈಡ್ ಲೈನ್‍ಮಾಡಿದರು ಎಂದು ಅಮಿತ್ ಶಾ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತವೆ. ಇದು ನೂರಕ್ಕೆನೂರರಷ್ಟು ಸತ್ಯಕ್ಕೆ ದೂರವಾಗಿದೆ ಎಂದರು. ಇದನ್ನೂ ಓದಿ: ತಲೈವಿ ರಿಲೀಸ್‍ಗೂ ಮುನ್ನ ಜಯಲಲಿತಾ ಸಮಾಧಿಗೆ ಕಂಗನಾ ಭೇಟಿ

ಯಡಿಯೂರಪ್ಪನವರ ಬಗ್ಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ದಾವಣಗೆರೆಯಲ್ಲಿ ಅಮಿತ್ ಶಾ ಹೇಳಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಗಟ್ಟಿ ನಿಲುವಿನ ಬಗ್ಗೆ ವರಿಷ್ಠರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಚುನಾವಣೆ ಎಂದು ಹೇಳಿದ್ದಾರೆ. ಇದನ್ನು ತಪ್ಪಾಗಿ ಅರ್ಥೈಸುವುದು ಬೇಡ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಚುನಾವಣೆ ನಡೆಯುತ್ತದೆ. ಮುಖ್ಯಮಂತ್ರಿಗಳು ಆಗಿದ್ದರಿಂದ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎಂದು ಹೇಳಿದ್ದಾರೆ ಅಷ್ಟೆ. ಯಡಿಯೂರಪ್ಪನವರು ಪಕ್ಷ ಕಟ್ಟಲು ದೊಡ್ಡ ಕೊಡುಗೆ ಇದೆ ಎಂದು ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ.ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಸರ್ಕಾರ ಇದ್ದಾಗ ವೀರಶೈವ ಲಿಂಗಾಯತರನ್ನು ಒಡೆಯಲು ಪ್ರಯತ್ನ ಮಾಡಿ ವಿಫಲರಾಗಿದ್ದೀರಿ. ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮ ಎಂದು ನಿಮ್ಮ ಬಾಯಲ್ಲಿ ಬರಬಾರದು. ಅಖಂಡ ವೀರಶೈವ ಲಿಂಗಾಯತ, ಒಳ ಪಂಗಡ ಸೇರಿಸಿ ವೀರಶೈವ ಲಿಂಗಾಯತ ಧರ್ಮಕ್ಕೆ ಕೇಳಿ. ಹಿಂದುಳಿದ ವರ್ಗದ ಸ್ಥಾನಮಾನ ಕೇಳಿ, ಒತ್ತಾಯ ಮಾಡಿ. ಆಗ ನಾವೂ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಆದರೆ ವೀರಶೈವ ಲಿಂಗಾಯತರನ್ನು ಒಡೆಯಲು ಅವಕಾಶ ಕೊಡುವುದಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *