ದಾವಣಗೆರೆ: ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತವೆ. ಅಲ್ಲದೆ ಇಷ್ಟು ದಿನ ಇವರ ಕಷ್ಟಕ್ಕೆ ಸ್ಪಂದಿಸದ ನಾಯಕರು ಚುನಾವಣಾ ಸಂದರ್ಭದಲ್ಲಿ ಹಬ್ಬ ಹರಿದಿನಗಳ ಶುಭಾಶಯ ಕೋರಿ ಸೀರೆ, ಕುಕ್ಕರ್, ಸೇರಿದಂತೆ ಹಲವಾರು ಉಡುಗೊರೆಗಳನ್ನು (Gift) ಮತದಾರರಿಗೆ ನೀಡಿ ಮತ ಸೆಳೆಯುವ ತಂತ್ರವನ್ನು ಮಾಡುತ್ತಾರೆ. ಇದೀಗ ನಮಗೆ ಸೀರೆ ಬೇಡ, ಮೂಲಭೂತ ಸೌಕರ್ಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಸೀರೆಗಳನ್ನು (Saree) ಬೀದಿಗೆ ಎಸೆದಿರುವ ಪ್ರಸಂಗ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ (Davanagere) ದಕ್ಷಿಣ ಕ್ಷೇತ್ರದ ಶಾಸಕ ಕಾಂಗ್ರೆಸ್ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಕಳೆದ 4 ಚುನಾವಣೆಯಿಂದ ಗೆದ್ದು ಆಡಳಿತ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಕಳೆದ 1 ತಿಂಗಳಿನಿಂದ ದಾವಣಗೆರೆಯ ಉತ್ತರ ಹಾಗೂ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ಎಸ್ ಮಲ್ಲಿಕಾರ್ಜುನ್ ಭಾವಚಿತ್ರವಿರುವ ಬ್ಯಾಗ್ಗಳಲ್ಲಿ ಸೀರೆ, ಕುಕ್ಕರ್, ಸೇರಿದಂತೆ ಗೃಹ ಬಳಕೆ ವಸ್ತುಗಳನ್ನು ಮತದಾರರಿಗೆ ನೀಡುತ್ತಿದ್ದಾರೆ. ಅದರಲ್ಲಿ ಯುಗಾದಿ ಹಬ್ಬದ ಶುಭಾಶಯಗಳು ಎಂದು ಶುಭಾಶಯ ತಿಳಿಸುತ್ತಾ ಉಡುಗೊರೆಗಳನ್ನು ಹಂಚಿಕೆ ಮಾಡುತ್ತಿದ್ದಾರೆ.
Advertisement
Advertisement
ಭಾಷಾ ನಗರದಲ್ಲಿ ಗಿಫ್ಟ್ ಹಂಚಿಕೆ ಮಾಡಿದ್ದು ಅಲ್ಲಿನ ಸ್ಥಳೀಯ ಮಹಿಳೆಯರು ಶಾಮನೂರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸರಿಯಾದ ಚರಂಡಿ ಇಲ್ಲ, ರಸ್ತೆ ಇಲ್ಲ. ಪ್ರಾಣಿಗಳು ವಾಸ ಮಾಡುವ ರೀತಿ ನಾವು ವಾಸ ಮಾಡುತ್ತಾ ಇದ್ದೇವೆ. ಮೂಲಭೂತ ಸೌಕರ್ಯಗಳನ್ನು ಒದಗಿಸಿ ಎಂದರೆ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆದರೆ ಈಗ ಸೀರೆಗಳನ್ನು ಕೊಟ್ಟು ಹೋಗುತ್ತಿದ್ದಾರೆ. ಈ ಸೀರೆಗಳು ಬೇಡ ಎಂದು ಸ್ಥಳೀಯ ಮಹಿಳೆಯರು ಕೊಟ್ಟ ಸೀರೆಗಳನ್ನು ರಸ್ತೆಯಲ್ಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಅತ್ತೆ-ಸೊಸೆ ಮಧ್ಯೆ ಜಗಳ ತಂದಿಡುತ್ತಿದೆ- ಸಿ.ಎಂ ಇಬ್ರಾಹಿಂ
Advertisement
ಸ್ಥಳೀಯರು ಹಲವು ವರ್ಷಗಳಿಂದ ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದರು. ನಮಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಶಾಸಕರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಭಾಷಾ ನಗರ 17ನೇ ಕ್ರಾಸ್ ಎಲ್ಲಿದೆ ಎಂದು ಶಾಸಕರು ಕೇಳುತ್ತಾರೆ. ಅಷ್ಟರ ಮಟ್ಟಿಗೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಇಲ್ಲಿನ ಸ್ಥಳೀಯ ಪ್ರತಿನಿಧಿಗಳು ಕೂಡಾ ಅವರ ಗಮನಕ್ಕೆ ತರುತ್ತಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ನಿಂತು ಮಕ್ಕಳಿಗೆ ಕಾಯಿಲೆಗಳು ಬರುತ್ತಿವೆ. ಈಗ ಬಂದ ಹಬ್ಬದ ಶುಭಾಶಯ ತಿಳಿಸಿ ಗಿಫ್ಟ್ ಕೊಡ್ತಾರೆ. ನಮಗೆ ಗಿಫ್ಟ್ ಬೇಡ. ಮೂಲಭೂತ ಸೌಕರ್ಯ ಬೇಕು. ಇಲ್ಲವಾದರೆ ಚುನಾವಣೆಯಲ್ಲಿ ನಾವು ನಿರ್ಧಾರ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ದಾವಣಗೆರೆ ದಕ್ಷಿಣ ಕ್ಷೇತ್ರದ ಜನರು ಸರಿಯಾದ ಮೂಲಭೂತ ಸೌಕರ್ಯ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದು, ಚುನಾವಣೆ ಬಂದಿದೆ ಎಂದು ಗಿಫ್ಟ್ಗಳನ್ನು ನೀಡಿ ಮನವೊಲಿಸುವ ಕೆಲಸ ರಾಜಕೀಯ ಪಕ್ಷಗಳು ಮಾಡುತ್ತಿವೆ. ಇದಕ್ಕೆ ಭಾಷಾ ನಗರದ ನಿವಾಸಿಗಳು ತಕ್ಕ ಶಾಸ್ತಿ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿದೇವತೆ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರು