ಬೀದರ್: ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ವೇಳೆ ನೃತ್ಯಗಾರರ ಜೊತೆ ಸೇರಿ ಬಸವಕಲ್ಯಾಣ ಶಾಸಕ ಶರಣು ಸಲಗಾರ ಭರ್ಜರಿ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
Advertisement
ಶುಕ್ರವಾರದಂದು ನಗರದ ಬಸವಕಲ್ಯಾಣ ಪಟ್ಟಣದಲ್ಲಿ ನೂತನವಾಗಿ ಉದ್ಘಾಟನೆಯಾದ ಡ್ಯಾನ್ಸ್ ಕ್ರೇಜಿ ಅಕಾಡೆಮಿ ಉದ್ಘಾಟನೆಯಲ್ಲಿ ಡಾನ್ಸ್ ಮಾಡಿದ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್
Advertisement
Advertisement
ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಾದ ಬಸವಕಲ್ಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ನಾರಾಯಣ ರಾವ್ ಗೆಲುವು ಸಾಧಿಸಿದ್ದರು. ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸಿದ್ದ ನಾರಾಯಣ ರಾವ್ ಕೋವಿಡ್ ಸೋಂಕಿಗೆ ತುತ್ತಾಗಿ ಮೃತಪಟ್ಟರು. ಈ ಹಿನ್ನಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ಮಾಲಾ ಅವರ ವಿರುದ್ಧ ಬಿಜೆಪಿ ಪರ ನಿಂತು ಭರ್ಜರಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ – ಯುವಕನ ಪ್ರಶ್ನೆಗೆ ಪೊಲೀಸರ ‘ಸಿಲ್ಲಿ ಪಾಯಿಂಟ್’ ಉತ್ತರ