Connect with us

Corona

ಶಾಸಕ ಶಿವಲಿಂಗೇಗೌಡರಿಗೆ ಕೊರೊನಾ ಪಾಸಿಟಿವ್

Published

on

ಹಾಸನ: ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಶಿವಲಿಂಗೇಗೌಡ ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆರೋಗ್ಯವಾಗಿದ್ದೇನೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕ ಶಿವಲಿಂಗೇಗೌಡ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್

Advertisement
Continue Reading Below

ನಿನ್ನೆಯಷ್ಟೇ ಶಾಸಕ ಶಿವಲಿಂಗೇಗೌಡ ಅರಸೀಕೆರೆ ನಗರಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದರು. ಹೀಗಾಗಿ ಶಾಸಕರ ಜೊತೆ ಹಲವರು ಪ್ರಾಥಮಿಕ ಸಂಪರ್ಕದಲ್ಲಿದ್ದು ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

Click to comment

Leave a Reply

Your email address will not be published. Required fields are marked *