ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ (Bhuvaneshwari Statue) ಸ್ಥಾಪನೆ ಮಾಡಲಾಗುತ್ತದೆ ಅಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಲಿಗೆ ಮನಸ್ಥಿತಿಗೆ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
Advertisement
Advertisement
ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಕುಳಿತ ಭಂಗಿಯಲ್ಲಿ ಇರುವ ಭುವನೇಶ್ವರಿ ತಾಯಿ ಪ್ರತಿಮೆ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ ಅಂತ ಸಚಿವರು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್ ಕಿಡಿ
Advertisement
Advertisement
ಪ್ರತಿಮೆ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡ್ತೀವಿ. ಈಗಾಗಲೇ ಸಿಎಂ ಬಜೆಟ್ ನಲ್ಲಿ 3 ಕೋಟಿ ಹಣ ಘೋಷಣೆ ಮಾಡಿದ್ದಾರೆ.ಹೆಚ್ಚು ಹಣ ಬೇಕಾದ್ರೆ ಸಿಎಂ ಬಳಿ ಮನವಿ ಮಾಡ್ತೀವಿ ಅಂತ ಸಚಿವರು ತಿಳಿಸಿದರು.
Web Stories