ಕಾರವಾರ: ಬೆಳಗ್ಗೆ ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಮತದಾನ ಮಾಡಲು ಆಗಲಿಲ್ಲ ಎಂದು ಯಲ್ಲಾಪುರದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಗೈರಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗ್ಗೆ ಆರೋಗ್ಯ ಸರಿ ಇರಲಿಲ್ಲ. ವೈದ್ಯರ ಸಲಹೆಯಂತೆ 6 ಗಂಟೆಗೆ ಬರಬೇಕಾಯ್ತು. ಅಸಮಾಧಾನವಿದ್ದಿದ್ದರೇ ಅಡ್ಡ ಮತದಾನ ಮಾಡುವ ಅವಕಾಶ ಇತ್ತು. ಹಾಗೆ ಮಾಡಲಿಲ್ಲ ಎಂದರು. ಇದನ್ನೂ ಓದಿ: ಸೋಲು ನಮಗೆ, ನಮ್ಮ ಕುಟುಂಬಕ್ಕೆ ಹೊಸದೇನು ಅಲ್ಲ: ಹೆಚ್‌ಡಿಕೆ
Advertisement
Advertisement
ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು,ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ. ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ. ಅದು ಜಿಲ್ಲಾಮಟ್ಟದಲ್ಲಿಮಾತ್ರ ಎಂದು ಹೆಬ್ಬಾರ್ ಹೇಳಿದರು.
Advertisement
ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಾಧಾನ ಇಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ ಎಂದು ತಿಳಿಸಿದರು.