Connect with us

Bellary

ಸಿಎಂ ಮೊಂಡುತನ ಮಾಡಿ ಜಿಲ್ಲೆ ರಚಿಸಿದ್ರೆ ನಾನೇನು ಮಾಡ್ಲಿ: ರೆಡ್ಡಿ ಪ್ರಶ್ನೆ

Published

on

Share this

– ಜಿಲ್ಲೆಯ ಜನರೇ ಬಿಜೆಪಿಗೆ ತಕ್ಕ ಪಾಠ ಕಳಿಸ್ತಾರೆ

ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಖಡಕ್ಕಾಗಿ ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ವಿಚಾರದ ಕುರಿತ ಪ್ರಶ್ನಿಸಿದಾಗ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಈ ಜಿಲ್ಲೆಯ ಜನರು, ವಿಜಯನಗರ ಜಿಲ್ಲೆ ರಚನೆಯ ವಿರೋಧಿಸಿ ಹೋರಾಟ ಮಾಡಿದರೆ ಅವರೊಂದಿಗೆ ನಾನೂ ನಿಲ್ಲುವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಷಣೆ- ಸಂಪುಟ ಅಸ್ತು

ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೋಳಾಗುತ್ತದೆ. ಈ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ. ವಿಜಯನಗರ ಜಿಲ್ಲೆ ಬೇಡ ಬೇಡ ಅಂತ ಎಷ್ಟು ಬಾರಿ ಸಿಎಂ ಬಿಎಸ್‍ವೈ ಅವರಿಗೆ ಹೇಳಬೇಕು. ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಿ ಹೇಳಿದ್ದೇವೆ. ಇನ್ನೆಷ್ಟು ಬಾರಿ ಹೇಳಬೇಕು. ಡಿವೈಡ್ ಆಗಲೇಬೇಕು ಎಂದು ಡಿಸೈಡ್ ಆದರೆ ನಾವೇನು ಮಾಡಬೇಕು. ರಾಜ್ಯ ಸರ್ಕಾರ ಮೊಂಡುತನಕ್ಕೆ ಬಿದ್ರೆ ನಾವೇನು ಮಾಡಬೇಕು. ನಾನಂತೂ ಇನ್ನೊಂದು ಬಾರಿ ಸಿಎಂಗೆ ಹೇಳಲ್ಲ. ಯಾರಾದರೂ ಈ ಬಗ್ಗೆ ಹೋರಾಟ ಮಾಡಿದರೆ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದರು.

ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಜನರೇ ಬಿಜೆಪಿ ತಕ್ಕ ಪಾಠ ಕಲಿಸುತ್ತಾರೆ. ಜನರು ಈ ಬಗ್ಗೆ ಹೋರಾಟ ಮಾಡುತ್ತಾರೆ. ನನಗೆ ಪಕ್ಷ ಮುಖ್ಯ ಅಲ್ಲ, ನನಗೆ ಜನರೇ ಮುಖ್ಯ. ಜನರು ಹೋರಾಟ ಮಾಡಿದರೆ ನಾನೂ ಜನರ ಪರವಾಗಿ ಹೋರಾಟಕ್ಕೆ ಇಳಿಯುವೆ ಎಂದು ತಿಳಿಸಿದರು. ಇದನ್ನೂ ಓದಿ: ವಿಜಯನಗರ ಪ್ರತ್ಯೇಕ ಜಿಲ್ಲೆ ನಿರ್ಧಾರ ಸ್ವಾಗತಾರ್ಹ: ಆನಂದ್ ಸಿಂಗ್

Click to comment

Leave a Reply

Your email address will not be published. Required fields are marked *

Advertisement