ಬೆಂಗಳೂರು: ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ನೇಮಕಗೊಂಡಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಬುಧವಾರ ಐದು ರಾಜ್ಯಗಳಿಗೆ ಉಸ್ತುವಾರಿ ನೇಮಿಸಿ ಆದೇಶ ಹೊರಡಿಸಿದೆ. ಈ ಪೈಕಿ ಸೌಮ್ಯಾ ರೆಡ್ಡಿ ಅವರನ್ನು ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವರಿಯಾಗಿ ನೇಮಿಸಿ ಮಾಜಿ ಸಂಸದೆ ಸುಷ್ಮಿತ ದೇವ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿದ್ದರು.
Advertisement
ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ನನಗೆ ಈ ಜವಾಬ್ದಾರಿಯನ್ನು ನೀಡಿರುವ ನಮ್ಮ ಪಕ್ಷದ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ ಮತ್ತು ನಮ್ಮ ದೇಶಾದ್ಯಂತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ.
2/2 pic.twitter.com/8nWoulePk6
— Sowmya | ಸೌಮ್ಯ (@Sowmyareddyr) August 28, 2019
Advertisement
ಸೌಮ್ಯಾ ರೆಡ್ಡಿ ಅವರ ತಂದೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿ ರಾಜ್ಯ ನಾಯಕರ ವಿರುದ್ಧವೇ ಗುಡುಗಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆಗ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿಯಾಗಿ ಅವರ ಮಾತಿನಂತೆ ತಂದೆಯನ್ನು ಪಕ್ಷದಲ್ಲಿಯೇ ಉಳಿಯುವಂತೆ ಮಾಡಿದ್ದರು. ಅವರ ಪಕ್ಷ ನಿಷ್ಠೆ, ಅನುಭವದ ಆಧಾರದ ಮೇಲೆ ಹೆಚ್ಚಿನ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಗೆ ಉಸ್ತುವಾರಿಯಾಗಿ ನನ್ನನು ನೇಮಿಸಿರುವ ನಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸುಶ್ಮಿತಾ ದೇವ್ ರವರಿಗೆ ನನ್ನ ಅನಂತ ಧನ್ಯವಾದಗಳು.
1/2 pic.twitter.com/j2P3aS5Kjq
— Sowmya | ಸೌಮ್ಯ (@Sowmyareddyr) August 28, 2019