ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.
ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಸೌಮ್ಯ ರೆಡ್ಡಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಮೂಲಕ ಪಕ್ಷದ ಮುಖಂಡರಿಗೆ ದೂರು ನೀಡಿದ್ದಾರೆ.
Advertisement
ತಮಗೆ ನೀಡಿರುವ ಸಂಸದೀಯ ಕಾರ್ಯದರ್ಶಿ ಹುದ್ದೆಯೂ ಬೇಡ ಎಂದು ಸೌಮ್ಯಾ ಪಕ್ಷದ ಮುಖಂಡರಿಗೆ ಪತ್ರ ಬರೆದಿದ್ದಾರೆ. ಶಾಸಕಿಯಾಗಿಯೇ ಸಾಕಷ್ಟು ಕೆಲಸ ಮಾಡಲು ಇದೆ. ಸಂಸದೀಯ ಕಾರ್ಯದರ್ಶಿಯಂತಹ ಜವಬ್ದಾರಿ ನಿರ್ವಹಿಸಲಾಗಲ್ಲ. ಕಾಂಗ್ರೆಸ್ ನಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಹಿಂದೇಟು ಆಗುವುದು ಸಹಜ. ಅದು ರಾಜಕೀಯದ ಒಂದು ಭಾಗ ಎಂದು ಟ್ವಿಟ್ಟರ್‍ನಲ್ಲಿ ವ್ಯಂಗ್ಯವಾಡಿದ್ದಾರೆ.
Advertisement
Advertisement
ಪತ್ರದಲ್ಲೇನಿದೆ..?
ಕಾಂಗ್ರೆಸ್ ಪಕ್ಷ ನನಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್ ನೀಡಿದ್ದು, ಜಯನಗರದ ಮತದಾರರು ನನಗೆ ಆಶೀರ್ವದಿಸಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿ ಅಭಿವೃದ್ಧಿ ಮಾಡಬೇಕಾಗಿದೆ. ನನಗೀಗ ಯಾವ ರೀತಿಯ ಪಾರ್ಲಿಮೆಂಟ್ರಿ ಸೆಕ್ರೆಟರಿ ಹಾಗೂ ಯಾವುದೇ ರೀತಿಯ ಹುದ್ದೆ ಬೇಡ. ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ. ಆದ್ರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಾದವರಿಗೆ ಹಿಂದೇಟು ಆದರೆ ಬೇಸರವಾಗುತ್ತದೆ.
Advertisement
ನಾನು ಮೊದಲನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇನ್ನೂ ನನ್ನ ಕ್ಷೇತ್ರದ ಹಲವಾರು ಕೆಲಸಗಳು ಮಾಡಲು ನನಗೆ ಬಹಳ ಸಮಯ ಬೇಕಾಗಿದೆ. ನನಗೇ ಪಾರ್ಲಿಮೆಂಟ್ ಸೆಕ್ರೆಟರಿಯ ಸ್ಥಾನಮಾನ ನೀಡಿರುವುದು ಸದ್ಯಕ್ಕೆ ಬೇಡ. ಅದು ಯಾರಿಗೆ ಅವಶ್ಯಕತೆ ಇದೆ ಅವರಿಗೆ ಕೊಡಿ.
ನನಗೆ ನನ್ನ ಕ್ಷೇತ್ರದ ಜನರಿಗೆ ಕೆಲ್ಸ ಮಾಡಿ ಅವರ ಋಣವನ್ನು ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಕೇವಲ ಒಂದು ಶಾಸಕರಿಂದ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದುಕೊಂಡಿದ್ದಾರೆ. ಈ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಗೆ ಟ್ಯಾಗ್ ಮಾಡಿದ್ದಾರೆ.
— Sowmya | ಸೌಮ್ಯ (@Sowmyareddyr) December 21, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv