-ರಾಮುಲು ಅಂದ್ರೆ ಕಾಂಗ್ರೆಸ್ ನಾಯಕರು ನಡುಗ್ತಾರೆ!
ಕೊಪ್ಪಳ: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರ ಬಂಧನದಲ್ಲಿ ಸರ್ಕಾರದ ಕೈವಾಡವಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಬಂಧಿಸುವ ಮೂಲಕ ಸಿಎಂ ರಾಜಕೀಯ ರಿವೇಂಜ್ ತೀರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಆರೋಪಿಸಿದ್ದಾರೆ.
ಜಿಲ್ಲೆಯ ಚಿಕ್ಕವಂಕಲಾಕುಂಟಾ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ, ಇಂದು ರಾಮುಲು ಅನ್ನುವಂತಹ ವ್ಯಕ್ತಿ ಜನರ ಆಶೀರ್ವಾದದಿಂದ ಬಹಳಷ್ಟು ಶಕ್ತಿಶಾಲಿಯಾಗಿ ಬೆಳೆದಿದ್ದಾನೆ. ಬಿಜೆಪಿಯಲ್ಲಿ ಓರ್ವ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿದ್ದೇನೆ. ಶ್ರೀರಾಮುಲು ಪಕ್ಷ ತೊರೆಯುತ್ತಾರೆ ಎಂಬ ಸುಳ್ಳು ಸುದ್ದಿಗಳನ್ನು ಯಾರು ಹರಡಿಸಬಾರದು. ಇವತ್ತು ರಾಮುಲು ಅಂದ್ರೆ ಎಲ್ಲ ಕಾಂಗ್ರೆಸ್ ನಾಯಕರು ನಡುಗುತ್ತಾರೆ. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿಸಿ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಭಾರತೀಯ ಜನತಾ ಪಾರ್ಟಿ ಇಂದು ನನ್ನನ್ನು ಶಕ್ತಿಶಾಲಿಯಾಗಿ ಬೆಳೆಸಿದೆ. ಹಾಗಾಗಿ ಪಕ್ಷ ತೊರೆಯುವ ಮಾತೇ ಬರಲ್ಲ. ಇತ್ತೀಚೆಗೆ ನಡೆದ ಕೆಲ ಘಟನಾವಳಿಗಳನ್ನ ನೋಡಿದ್ರೆ ರಾಜ್ಯ ಸರ್ಕಾರ ರಾಜಕೀಯ ರಿವೇಂಜ್ ತೀರಿಸಿಕೊಳ್ಳುತ್ತಿದೆ. ಈ ಸಂಬಂಧ ಪಕ್ಷದ ಹಿರಿಯ ಮುಖಂಡರಾದ ಬಿ.ಎಸ್ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ. ಅಂಬಿಡೆಂಟ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯ ಬಂಧನದ ಹಿಂದೆ ಸಂಪೂರ್ಣ ರಾಜಕೀಯವಿದೆ ಎಂದು ಶ್ರೀರಾಮುಲು ಆರೋಪಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews