Connect with us

Bengaluru City

ಕೇರಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಾಸಕ ಸುನಿಲ್ ಕುಮಾರ್‌ಗೆ ಕೊರೊನಾ

Published

on

ಬೆಂಗಳೂರು: ಕೇರಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಾಸಕ ಸುನಿಲ್ ಕುಮಾರ್ ಅವರೊಗೆ ಕೊರೊನಾ ಬಂದಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿ ತಿಳಿಸಿರುವ ಶಾಸಕರು, ತನ್ನ ಸಂಪರ್ಕದಲ್ಲಿದ್ದವರು ಕೂಡ ಮುಂಜಾಗ್ರತಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕರು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ. ನಾನು ವೈಧ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದು, ರಾಜಕೀಯ ನಾಯಕರು ಭರದ ಪ್ರಚಾರದಲ್ಲಿ ತೊಡಗಿದ್ದಾರೆ.

Click to comment

Leave a Reply

Your email address will not be published. Required fields are marked *