ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಮತ್ತೊಬ್ಬರು ಸಚಿವ ಸ್ಥಾನಕ್ಕೆ ಆಕಾಂಕ್ಷೆ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಸಚಿವ ಸ್ಥಾನ ಕೊಟ್ಟರೆ ಉತ್ತಮ ಕೆಲಸ ಮಾಡುವೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಗುರುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿ ಹೇಳಿದ್ದರು. ಈ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿತ್ತು. ಈ ಬೆನ್ನಲ್ಲೇ ಸುರೇಶ್ ಕುಮಾರ್ ಅವರು ಕೂಡ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?:
ಭಲೇ… ನಾನು ಸಚಿವ ಆಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡುವುದಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಒಳಗೊಂಡ ಪರಿವಾರದ ಸದಸ್ಯೆ ಹಾಗೂ ನೂತನ ಶಾಸಕಿ ಯಾವುದೇ ಮುಜುಗರವಿಲ್ಲದೆ ಬೇಡಿಕೆ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನು ಓದಿ: ಆ ಸಮಯಕ್ಕಾಗಿ 25 ನಿಮಿಷ ಕಾದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ
ಶಾಸಕಿ ಹೇಳಿದ್ದೇನು?:
ನನ್ನ ಪತಿಯವರೇ ಮುಖ್ಯಮಂತ್ರಿ ಆಗಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ. ಮಂತ್ರಿಸ್ಥಾನ ನೀಡಿ ಎಂದು ಬೇಡಿಕೆ ಇಡಲ್ಲ. ನಾನು ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿದ್ದು ನನ್ನನ್ನು ಆಯ್ಕೆ ಮಾಡಿದ ಜನತೆಗೆ ಕೃತಜ್ಞತೆ ಹೇಳುತ್ತೇನೆ ಎಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದರು.
ಭಲೇ,
" ನಾನು ಸಚಿವ ಆಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡುವುದಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ"
ಎಂಬ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ,
ಈಗಾಗಲೇ ಮುಖ್ಯಮಂತ್ರಿ, ಲೋಕೋಪಯೋಗಿ, ಸಾರಿಗೆ ಸಚಿವರನ್ನು ಒಳಗೊಂಡ ಪರಿವಾರದ ಸದಸ್ಯೆ ಹಾಗೂ
ನೂತನ ಶಾಸಕಿ.
ಯಾವುದೇ ಮುಜುಗರವಿಲ್ಲದೆ!
— S.Suresh Kumar (@nimmasuresh) November 16, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews