– ವಿಜಯೇಂದ್ರಗೆ ಧಮ್ ಇದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಅಂತ ಸವಾಲ್
ಹುಬ್ಬಳ್ಳಿ: ಬಿಜೆಪಿಯಿಂದ ಉಚ್ಛಾಟನೆಗೊಂಡ ಬಳಿಕ ಇದೇ ಮೊದಲಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮತ್ತೆ ಬಿ.ಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ, ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣೆ ಎದುರಿಸುವೆ. ನನಗೆ ಮುಸ್ಲಿಂ ಮತಗಳು (Muslims Vote) ಬೇಕಿಲ್ಲ, ಅವನಿಗೆ ಆ ಧಮ್ ಇದೇಯಾ..? ಅಂತ ಸವಾಲ್ ಹಾಕಿದರು. ಇದನ್ನೂ ಓದಿ: ಈ ಸರ್ಕಾರ ಪೋಸ್ಟ್ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ
ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು, ಈ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾದಾಗ, ನಾನೂ ಮರಳಿ ಪಕ್ಷಕ್ಕೆ ಸೇರುವೆ. ಯಡಿಯೂರಪ್ಪ ಕುಟುಂಬದಿಂದ ಬಿಜೆಪಿ ಮುಕ್ತ ಆದ ಮೇಲೆ ಪಕ್ಷಕ್ಕೆ ಹೋಗ್ತೀನಿ. ನಾನು ಒಳ್ಳೆಯವನೇ ಆದ್ರೆ ದುಷ್ಟರಿಗೆ ದುಷ್ಟ ಎಂದು ಎಚ್ಚರಿಕೆ ನೀಡಿದರು.
ಮುಂದುವರಿದು.. ವಿಜಯೇಂದ್ರ ನಿನಗೆ ಧಮ್ ಇದ್ರೆ ನನಗೆ ನೇರವಾಗಿ ಮಾತಾಡು. ಹಂದಿಗಳ ಕಡೆ ಮಾತಾಡಸಬೇಡ, ಹಂದಿಗಳು ಹೊರಗೆ ಇರಬೇಕು, ಮನೆ ಒಳಗೆ ಕರಕೋಬಾರದು. ಸ್ವಾಮಿಯಾಗಿ (ಜಂಗಮ) ಎಸ್‌ಸಿ ಸರ್ಟಿಫಿಕೇಟ್ ತಗೊಂಡಿದಾನೆ ನಾಚಿಕೆ ಆಗಲ್ವಾ? ಅಂತ ಹೆಸರು ಹೇಳದೇ ರೇಣುಕಾಚಾರ್ಯ ಕೆಂಡಾಮಂಡಲವಾದರು. ಇದನ್ನೂ ಓದಿ: ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ
ಅಲ್ಲದೇ ಪಂಚಮಸಾಲಿ ಟ್ರಸ್ಟ್ ಪ್ರಭಣ್ಣ ಲಫಂಗ.. ಬದ್ಮಾಷ್. ಮಠದ ಆಸ್ತಿಯನ್ನು ಹೊಡೆದಿದ್ದಾರೆ. ಕೂಡಲ ಸಂಗಮದ ಆಸ್ತಿಯನ್ನು ತನ್ನ ಕುಟುಂಬದ ಆಸ್ತಿ ಮಾಡಿಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದೆ ಡೀಸೆಲ್ ದರ ಏರಿಕೆ ಆದಾಗ ಯಾಕೆ ಲಾರಿ ಮಾಲೀಕರು ಮುಷ್ಕರ ಮಾಡಲಿಲ್ಲ? – ಡಿಕೆಶಿ