ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕ್ಷೇತ್ರದ ಪಾದರಾಯನಪುರದಲ್ಲಿ ಗಲಾಟೆ ನಡೆದರೂ, ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ಆದ್ರೆ ಜಮೀರ್ ಅಹ್ಮದ್ ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿರುವ ವಿಡಿಯೋ ವೈರಲ್ ಆಗಿದೆ.
ಕೊರೊನಾ ಸೋಂಕಿನಿಂದ ಬಲಿಯಾದವರ ಅಂತ್ಯಕ್ರಿಯೆಯನ್ನು ಆರೋಗ್ಯ ಇಲಾಖೆಯಿಂದಲೇ ಅತಿ ಸೂಕ್ಷ್ಮವಾಗಿ ನಡೆಸಲಾಗುತ್ತದೆ. ಅಂತ್ಯಕ್ರಿಯೆ ನಡೆಸುವಾಗ ಯಾವುದೇ ವಿಧಿವಿಧಾನಗಳು ಇರಲ್ಲ. ಸುರಕ್ಷತೆ ದೃಷ್ಟಿಯಿಂದ ಬಹುತೇಕ ಕುಟುಂಬಸ್ಥರಿಗೆ ಭಾಗಿಯಾಗಲು ಅವಕಾಶ ಸಹ ನೀಡಲ್ಲ. ಆದರೆ ಶಾಸಕ ಜಮೀರ್ ಅಹ್ಮದ್ ಅಂತ್ಯಕ್ರಿಯೆ ಪಾಲ್ಗೊಂಡಿದ್ದರ ಬಗ್ಗೆ ಚರ್ಚೆಗಳು ಆರಂಭವಾಗಿದೆ.
Advertisement
ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ.
ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ.#COVID
— B Z Zameer Ahmed Khan (@BZZameerAhmedK) April 20, 2020
Advertisement
ಪಾದರಾಯನಪುರ ಗಲಾಟೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಜಮೀರ್ ಅಹ್ಮದ್, ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.