ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Advertisement
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
Advertisement
Advertisement
ಗಾಯಾಳು ಮಂಜುನಾಥ್‍ನನ್ನು ಬೃಂದಾವನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಲಿಕೆಯಿಂದ ಅನುಮತಿ ಪಡೆದೇ ಪಟಾಕಿ ಸ್ಟೋರೇಜ್ ಮಾಡಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಸ್ಥಳೀಯರೇ ಮೃತಪಟ್ಟಿದ್ದಾರೆ. 75 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಕೆಲ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ
Advertisement
ಪಟಾಕಿ ಹಾಗೂ ಸಂಬಂಧಿಸಿದ ವಸ್ತುಗಳನ್ನು ಗೋಡೌನ್ ನಲ್ಲಿಟ್ಟುಕೊಂಡು, ಬೇರೆಡೆಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸರ್ಕಾರದಿಂದ ಬಡವರಿಗೆ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ ನಾನೂ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದರು.
ಪಟಾಕಿ ಅಂಗಡಿ, ಶ್ರೀ ಪತ್ರ ಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿಯಲ್ಲಿ ಪಟಾಕಿ ಸ್ಫೋಟ ಹಾಗೂ ಪಂಕ್ಚರ್ ಅಂಗಡಿಯಲ್ಲಿ ಹೈಡ್ರೋಲಿಕ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ನಗರ್ತರಪೇಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸಸ್ ಗೋಡೌನ್‍ನಲ್ಲಿ ಪಟಾಕಿ ಸ್ಫೋಟಗೊಂಡು ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟಾಕಿ ಸ್ಫೋಟದಿಂದ ಮೃತರ ದೇಹ ಛಿದ್ರಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಅಸ್ಲಾಂ, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.