ಬೆಂಗಳೂರು: ಬಿಜೆಪಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
Advertisement
ರಾಷ್ಟ್ರಧ್ವಜಕ್ಕೂ ಹಣ ಪಡೆದು ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿ ಕಾರುತ್ತಿದ್ದಾರೆ. ಆದರೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ
Advertisement
Advertisement
ಚಾಮರಾಜಪೇಟೆಯ ಮಕ್ಕಳ ಕೂಟದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಶ್ಲಾಘಿಸಿದ್ದಾರೆ. ಜೊತೆಗೆ ರಾಷ್ಟ್ರಧ್ವಜಕ್ಕೆ 25 ರೂ. ಹಣ ಪಡೆಯುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ರಾಷ್ಟ್ರಧ್ವಜದ ಮುಂದೆ ಹಣ ಏನು ಅಲ್ಲಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ
Advertisement
ಕಾಂಗ್ರೆಸ್ ನಾಯಕರ ವಿರೋಧದ ನಡುವೆ ಜಮೀರ್ ಹರ್ ಘರ್ ತಿರಂಗಾ ಅಭಿಯಾನವನ್ನು ಮೆಚ್ಚಿಕೊಂಡಿದ್ದು ಅಚ್ಚರಿ ಮೂಡಿಸಿದೆ.