ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ ಭುಗಿಲೆದಿದ್ದು, ಸಚಿವ ಸಂಪುಟ ವಿಸ್ತರಣೆಗೆ ಶಾಸಕರ ಬಿಗಿ ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಬಂಡಾಯ ವಿಚಾರವಾಗಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಶಾಸಕರು ಪಟ್ಟು ಹಿಡಿದಿದ್ದು, ಈ ಹಿನ್ನೆಲೆ ಅತೃಪ್ತ ಶಾಸಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Advertisement
ಎಂಬಿ ಪಾಟೀಲ್ ನೇತೃತ್ವದಲ್ಲಿ ಸಭೆ ಮಾಡಿ ಹೈಕಮಾಂಡ್ ಗೆ ಬಿಸಿ ಮುಟ್ಟಿಸಲು ಅತೃಪ್ತರು ನಿರ್ಧಾರ ಮಾಡಿದ್ದಾರೆ. ನಾಳಿನ ಅತೃಪ್ತ ಸಭೆಗೆ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಮತ್ತು ರಿಜ್ವಾನ್ ಹರ್ಷದ್ ಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಸತೀಶ್ ಜಾರಕಿಹೊಳಿ, ಡಾ ಸುಧಾಕರ್ ಸೇರಿದಂತೆ 15 ಕ್ಕೂ ಹೆಚ್ಚು ಶಾಸಕರು ಸೇರಲಿದ್ದಾರೆ.
Advertisement
ಮತ್ತೊಂದು ಕಡೆ ಜಮೀರ್, ಖಾದರ್ ವಿರುದ್ಧ ತನ್ವೀರ್ ಸೇಠ್ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅವರಿಬ್ಬರಿಗೂ ನಮ್ಮ ಸಮುದಾಯ ಪ್ರತಿನಿಧಿಸುವ ಸಾಮರ್ಥ್ಯ ಇಲ್ಲ. ಅರ್ಹರಲ್ಲದವರಿಗೆ ಸಂಪುಟದಲ್ಲಿ ಸ್ಥಾನಮಾನ ಕೊಟ್ಟಿದ್ದಾರೆ. ನನ್ನನ್ನು ಸೋಲಿಸಲು ಯತ್ನಿಸಿದ ಜಮೀರ್ ಅಹಮ್ಮದ್ ಬೇರೆ ಪಕ್ಷದಿಂದ ಬಂದವರಿಗೆ ಮಣೆ ಹಾಕಿದ್ದು ಎಷ್ಟು ಸರಿ? ಎಂದು ಪ್ರಶ್ನಿಸಿ ವೇಣುಗೋಪಾಲ್ ಎದುರು ತನ್ವೀರ್ ಸೇಠ್ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement