ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ (C.T.Ravi) ಪ್ರಾರ್ಥಿಸಿದ್ದಾರೆ.
ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ.
— C T Ravi 🇮🇳 ಸಿ ಟಿ ರವಿ (@CTRavi_BJP) January 14, 2025
Advertisement
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ
Advertisement
Advertisement
ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್‌ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?
ಘಟನೆ ನಡೆದ ದಿನ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಆ ದಿನ ರಾತ್ರಿ ಹಲವು ನಾಟಕೀಯ ಬೆಳವಣಿಗೆ ನಡೆದವು. ಮಾರನೇ ದಿನ ಕೋರ್ಟ್‌ನಲ್ಲಿ ಬಿಜೆಪಿ ನಾಯಕನಿಗೆ ಜಾಮೀನು ಸಿಕ್ಕಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಂದರ್ಶನವೊಂದರಲ್ಲಿ ಸಿ.ಟಿ.ರವಿ, ‘ಅಕ್ಕ ನಾನು ಹೃದಯದಿಂದ ಕೆಟ್ಟವನಲ್ಲ’ ಎಂದು ತಿಳಿಸಿದ್ದರು.