Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್

Districts

ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್

Public TV
Last updated: October 23, 2024 4:59 pm
Public TV
Share
3 Min Read
CT RAVI
SHARE

– ಯೋಗೇಶ್ವರ್‌ ಹುಲಿ ಮಣಿಸ್ತಾರಾ? ಬಲಿಯಾಗ್ತಾರಾ? ನೋಡಬೇಕು ಎಂದ ಎಂಎಲ್‌ಸಿ

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ (Channapatna) ದುರ್ಬಲವೆಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಅವರು ಟಾಂಗ್ ಕೊಟ್ಟರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದೂ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಅವರಂತಹ ಪ್ರಬಲ ನಾಯಕರನ್ನು ಹೊಂದಿದ ಕಾಂಗ್ರೆಸ್ ಪಕ್ಷ (Congress Party) ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ 

Yogeshwar DK Shivakumar Siddaramaiah

ನಿನ್ನೆ ಮೊನ್ನೆಯವರೆಗೂ ನಾನೇ ಕ್ಯಾಂಡಿಡೇಟ್ ಎಂದು ಡಿ.ಕೆ ಶಿವಕುಮಾರ್ ಹೇಳುತ್ತಿದ್ದರು. ಪೂರ್ವತಯಾರಿ ಮಾಡಿ ಓಡಾಡುತ್ತಿದ್ದರು. ಡಿ.ಕೆ ಸುರೇಶ್ ಅಲ್ಲಿ ಅಭ್ಯರ್ಥಿ ಎಂದು ಬಹಳ ಜನ ಅಂದುಕೊಂಡಿದ್ದರು. ಅಲ್ಲಿ ಯೋಗೇಶ್ವರ್‌ಗೆ ಟಿಕೆಟ್ ಕೊಟ್ಟು ಅಸಹಾಯಕತೆ ತೋರಿಸುತ್ತಾರೋ ಅಥವಾ ಯೋಗೇಶ್ವರ್ ಜೊತೆಗಿಟ್ಟುಕೊಂಡು ಡಿ.ಕೆ ಸುರೇಶ್ ಅಭ್ಯರ್ಥಿ ಆಗುತ್ತಾರೋ ನೋಡಬೇಕಿದೆ. ಆದರೆ, ಕಾಂಗ್ರೆಸ್ ತಾನು ಚನ್ನಪಟ್ಟಣದಲ್ಲಿ ದುರ್ಬಲ ಎಂದು ಒಪ್ಪಿಕೊಂಡಂತಾಗಿದೆ ಎಂದು ಸಿ.ಟಿ ರವಿ ತಿಳಿಸಿದರು.

ಹುಲಿ ಮಣಿಸುವರೇ? ಬಲಿ ಆಗುವರೇ?
ಯೋಗೇಶ್ವರ್ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡ ರಾಜಕಾರಣಿ. ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ರಾಜಕಾರಣ ಮಾಡಿದವರು. ಡಿ.ಕೆ ಶಿವಕುಮಾರ್ ಮತ್ತು ಅವರ ನಡುವಿನ ಶತ್ರುತ್ವ ಇವತ್ತು ನಿನ್ನೆಯದಲ್ಲ. ಹುಲಿ ಬೋನಿಗೆ ಹೋಗಿದ್ದಾರೆ. ಒಂದೋ ಹುಲಿಯನ್ನು ಮಣಿಸಬೇಕು. ಇಲ್ಲವೇ ಹುಲಿಗೆ ಬಲಿ ಆಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕುಡಚಿಯಲ್ಲಿ ರೈಲು ಹಳಿ ಪಕ್ಕವೇ ಕುಸಿದ ಭೂಮಿ – ಈಗ ಒಂದು ಹಳಿಯಲ್ಲಿ ಮಾತ್ರ ಸಂಚಾರ

ಇವತ್ತೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ರಾಜಕಾರಣ ಮತ್ತು ಯೋಗೇಶ್ವರ್ ರಾಜಕಾರಣದ ಚಿಂತನೆಯ ನಡುವೆ ಅಗಾಧವಾದ ಅಂತರವಿದೆ. ಯೋಗೇಶ್ವರ್ ಅವರು ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡುತ್ತಾರೆ. ಸದಾಕಾಲ ರಾಜಕೀಯ ಕ್ಷೇತ್ರದ ಲಾಭ ನಷ್ಟದ ಲೆಕ್ಕ ಹಾಕುತ್ತಾರೆ. ನಮ್ಮದು ಸೈದ್ಧಾಂತಿಕ ಬದ್ಧತೆಯ ರಾಜಕಾರಣ ಎಂದು ವಿವರಿಸಿದರು. ಲಾಭ ನಷ್ಟದ ಲೆಕ್ಕಾಚಾರಕ್ಕೆ ಅವಕಾಶವೂ ಇಲ್ಲ. ಆ ಚಿಂತನೆಯೂ ನಮ್ಮಲ್ಲಿಲ್ಲ ಎಂದು ನುಡಿದರು.

ಯೋಗೇಶ್ವರ್ ರಾಜೀನಾಮೆ ಕೊಟ್ಟ ಮೇಲೆ ಸೋದರಿಕೆ ಸಂಬಂಧವೇನೂ ಇಲ್ಲ. ನಾವು ಎನ್‍ಡಿಎ ಆಗಿ ಚನ್ನಪಟ್ಟಣದಲ್ಲಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು ನಿರ್ಣಯಿಸಿ ಚರ್ಚೆ ಮಾಡುವುದಿಲ್ಲ. ಚರ್ಚಿಸಿ ನಿರ್ಣಯಕ್ಕೆ ಬರುತ್ತೇವೆ. ಒಂದೂವರೆ ಎರಡು ತಿಂಗಳ ಹಿಂದೆಯೇ ನಾವು ಚನ್ನಪಟ್ಟಣದ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿಯವರ ಜೊತೆ ಚರ್ಚಿಸಿದ್ದೇವೆ. ಚನ್ನಪಟ್ಟಣ ಕುಮಾರಸ್ವಾಮಿಯವರು ಪ್ರತಿನಿಧಿಸಿದ ಕ್ಷೇತ್ರ. ಏಕಪಕ್ಷೀಯ ನಿರ್ಣಯ ಹೇರುವುದು, ನಮ್ಮ ನಿರ್ಣಯ ಹೇರುವುದಾಗಲೀ ಮೈತ್ರಿ ಅನಿಸುವುದಿಲ್ಲ. ಇಬ್ಬರೂ ಸೇರಿ ನಿರ್ಣಯಿಸಬೇಕಾಗುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಸಿ.ಟಿ ರವಿ ಉತ್ತರಿಸಿದರು.

ರಾಜ್ಯದಲ್ಲಿ ಜನಹಿತ ಮರೆತ ಸರ್ಕಾರ:
ಬೆಂಗಳೂರಿನಲ್ಲಿ ಜನರ ಬದುಕು ಬೀದಿಗೆ ಬಿದ್ದಿದೆ. ಇವತ್ತು ಜನಹಿತ ಮರೆತ ಸರ್ಕಾರ ರಾಜ್ಯದಲ್ಲಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಸ್ವಾಗತ ಮಾಡುವುದು ಜನರ ಬದುಕಿಗೆ ಸ್ಪಂದಿಸುವುದಕ್ಕಿಂತ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ಷೇಪಿಸಿದರು. ಇಂಥ ಸರ್ಕಾರ ಯಾಕಿರಬೇಕು ಹೇಳಿ ಎಂದು ಪ್ರಶ್ನಿಸಿದರು. ಮಳೆಯಿಂದ ಕಟ್ಟಡ ಕುಸಿತ ಸೇರಿ ಮಳೆ ಕಾರಣಕ್ಕೆ 8ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸರ್ಕಾರಕ್ಕೆ ಮಾನವೀಯತೆ ಇದೆಯೇ? ಸ್ಪಂದನೆ ಏನು? ಎಂದು ಕೇಳಿದರಲ್ಲದೇ, ಭ್ರಷ್ಟಾಚಾರದಲ್ಲಿ ತೊಡಗಿದ ಬದುಕಿದ್ದೂ ಸತ್ತಂತಿರುವ ಸರ್ಕಾರ ಇಲ್ಲಿದೆ ಎಂದು ಟೀಕಿಸಿದರು.

TAGGED:bjpChannapatnaChannapatna By ElectioncongressCP YogeshwarCT RaviDK Shivakumarಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆಡಿ.ಕೆ.ಶಿವಕುಮಾರ್ಬಿಜೆಪಿಯೋಗೇಶ್ವರ್ಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
7 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
8 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
8 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?