ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (CM Siddaramaiah) ಇಬ್ಬರು ರಾಜಕೀಯ ಕಾರ್ಯದರ್ಶಿ (Political Secretary) ಮತ್ತು ಓರ್ವ ಮುಖ್ಯ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ.
ಪರಿಷತ್ ಸದಸ್ಯರಾದ ಗೋವಿಂದರಾಜು (Govindaraju) ಮತ್ತು ನಸೀರ್ ಅಹ್ಮದ್ (Naseer Ahmed) ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿದರೆ ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳ್ (Sunil Kanugolu) ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಸಲಾಗಿದೆ. ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಪ್ರಕಟವಾಗಿದೆ. ಇದನ್ನೂ ಓದಿ: ಮೇ ತಿಂಗಳಿನಲ್ಲಿ 1.57 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?
Advertisement
Advertisement
ಡಾ ಕೆ.ಗೋವಿಂದರಾಜು ಅವರು ಏಷ್ಯಾ ಬಾಸ್ಕೆಟ್‌ಬಾಲ್‌ನ ನೂತನ ಅಧ್ಯಕ್ಷರಾಗಿ ಮೇ ತಿಂಗಳಿನಲ್ಲೇ ನೇಮಕವಾಗಿದ್ದರು. ಈ ಹುದ್ದೆಗೇರಿದ ಭಾರತದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೆ ಗೋವಿಂದರಾಜು ಅವರು ಪಾತ್ರರಾಗಿದ್ದರು.
Advertisement
Advertisement
ಚುನಾವಣೆ ಸಂದರ್ಭದ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನಿಲ್ ಕನುಗೋಳು ಎನ್ನಲಾಗಿದೆ. ಪಕ್ಷ ಗೆಲ್ಲುವಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದರು. ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.