– ಪ್ರತಾಪ್ ಸಿಂಹ ವಿರುದ್ಧ ಹಳ್ಳಿಹಕ್ಕಿ ಕಿಡಿ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಕನೆಕ್ಟಿಂಗ್ ಫ್ಯಾಮಿಲಿಯಾಗಿತ್ತು. ಆದರೆ ಇದೀಗ ಬಸವರಾಜ ಬೊಮ್ಮಾಯಿ ಸರ್ಕಾರ ಕನೆಕ್ಟಿಂಗ್ ಪೀಪಲ್ ಆಗಿದೆ ಎಂದು ಎಂ.ಎಲ್.ಸಿ ಎಚ್.ವಿಶ್ವನಾಥ್ ಹೊಗಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ನೆರಳಲ್ಲ. ಅವರು ರಾಜ್ಯಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ. ಜನರ ಸುತ್ತ ಅಭಿವೃದ್ಧಿ ಸುತ್ತಬೇಕು, ಅಭಿವೃದ್ಧಿ ಸುತ್ತ ಜನ ಸುತ್ತಬಾರದು ಅನ್ನೋದನ್ನು ತೋರಿಸಿದ್ದಾರೆ. ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ ಎಂಬ ಅಮಿತ್ ಶಾ ಹೇಳಿಕೆಗೆ ವಿಶ್ವನಾಥ್ ಬೆಂಬಲ ಸೂಚಿಸಿದ್ದು, ಯಾರು ಸಿಎಂ ಪಕ್ಷದ ಅಧ್ಯಕ್ಷರಾಗಿರುತ್ತಾರೋ ಅವರದ್ದೇ ನಾಯಕತ್ವ ಇರುತ್ತದೆ. ಸಾಮೂಹಿಕ ನಾಯಕತ್ವ ಇದ್ದರೂ ಒಬ್ಬ ಮೇಟಿ ಬೇಕು. ಅದು ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ ಆಗಿದ್ದಾರೆ ಎಂದರು. ಇದನ್ನೂ ಓದಿ: ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ
Advertisement
Advertisement
ಇದೇ ವೇಳೆ ಸರ್ಕಾರಿ ಭೂ ಒತ್ತುವರಿಗೆ ಸರ್ವೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಶಾಸಕ ಸಾ.ರಾ ಮಹೇಶ್ ಹಾಗೂ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿದರು. ಚಿನ್ನ ಉಜ್ಜಿದಷ್ಟು ಹೊಳಪು ಬರುತ್ತದೆ. ನಡೆಯಲಿ ಮರು ಸರ್ವೇ ಸತ್ಯ ಹೊರಬರಲಿ. ಸಾ.ರಾ ಮಹೇಶ್ ಒತ್ತುವರಿ ಮಾಡಿಲ್ಲವಾದರೆ ಭಯ ಏಕೆ..?, ಒತ್ತುವರಿ ಮಾಡಿಕೊಂಡವರಿಗೆ ಸರ್ವೆಯ ಭಯವಿರುತ್ತದೆ. ಹಿಂದಿನ ಸರ್ವೆ ವರದಿ ಪ್ರಾಮಾಣಿಕವಾಗಿರಲಿಲ್ಲ. ಇದನ್ನು ನಾನು ಮೊದಲೇ ಹೇಳಿದ್ದೆ. ವರದಿ ಹೇಗೆ ನೀಡಿದರು ಅನ್ನೋದು ಜನರಿಗೂ ಗೊತ್ತಿದೆ. ಎಸ್.ಟಿ ಸೋಮಶೇಖರ್ ಸರ್ಕಾರದ ಭಾಗ. ಅವರು ಈ ರೀತಿ ಹೇಳಿಕೆ ನೀಡಬಾರದು. ಅಧಿಕಾರಿಗೆ ಸರ್ಕಾರವೇ ಅಧಿಕಾರ ನೀಡಿದೆ. ಆ ಅಧಿಕಾರ ಬಳಸಿ ಅವರು ಆದೇಶ ಮಾಡಿದ್ದಾರೆ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರದ ಕುರಿತು ಮಾತನಾಡಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಹಳ್ಳಿಹಕ್ಕಿ ವಿಶ್ವನಾಥ್ ಮತ್ತೆ ವಾಗ್ದಾಳಿ ನಡೆಸಿದರು. ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅನ್ನುತ್ತಾರೆ. ಪ್ರತಾಪ್ ಸಿಂಹ ತಮ್ಮ ಸ್ಥಾನಕ್ಕೆ ಗೌರವವಿಟ್ಟು ಮಾತನಾಡಲಿ. ಅವರ ನೆನ್ನೆಯ ಪತ್ರವೂ ಸಂಸದರ ಸ್ಥಾನಕ್ಕೆ ಗೌರವ ತರುವ ಪತ್ರವಲ್ಲ. ಹಿಂದಿನ ಸರ್ಕಾರದಲ್ಲೇ ದಶಪಥ ರಸ್ತೆ ಯೋಜನೆಗೆ ದಾಖಲೆ ಇದೆ. ಹೀಗಾಗಿ ಯೋಜನೆ ತಮ್ಮದೇ ಅಂತಾ ಹೇಳಿಕೊಳ್ಳುವುದು ಸರಿಯಲ್ಲ ಎಮದು ಕಿಡಿಕಾರಿದರು. ಇದನ್ನೂ ಓದಿ: ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು