ಮಂಗಳೂರು: ಡಿಸಿಎಂ, ಸಚಿವ ಸ್ಥಾನಕ್ಕಾಗಿ ರಂಪಾಟ ಮಾಡ್ತಿರೋ ಮಾಜಿ ಸಚಿವ ಎಂ.ಬಿ ಪಾಟೀಲ್ ಪರವಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬ್ಯಾಟಿಂಗ್ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಟೀಲರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತಾಡಿಲ್ಲ. ಈಗಿನ ವ್ಯವಸ್ಥೆ ವಿರುದ್ಧ ಅಷ್ಟೇ ಮಾತಾಡುತ್ತಿದ್ದಾರೆ. ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದರಿಂದ ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ. ಸಿದ್ದರಾಮಯ್ಯ ಎಂ.ಬಿ ಪಾಟೀಲ್ ಜೊತೆಗೆ ಮಾತನಾಡಿದ್ದು ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ ಅಂತಾ ಸಮಜಾಯಿಷಿ ನೀಡಿದ್ದಾರೆ.
Advertisement
Advertisement
ಆ ಮೂಲಕ ಎಂ.ಬಿ ಪಾಟೀಲ್ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರೋದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ತನಗೆ ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಮಂತ್ರಿ ಸ್ಥಾನಕ್ಕಾಗಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಸಿಕ್ಕರೆ ಅನುಕೂಲವಾಗತ್ತೆ ಎಂದಿದ್ದಾರೆ.
Advertisement
ಇದೇ ವೇಳೆ, ಪೇಜಾವರ ಶ್ರೀಗಳು ಕೇಂದ್ರ ಸರಕಾರದ ಸಾಧನೆ ಬಗ್ಗೆ ಪ್ರಶ್ನೆ ಮಾಡಿದ್ದನ್ನು ಐವನ್ ಡಿಸೋಜ ಸಮರ್ಥನೆ ಮಾಡಿದ್ದಾರೆ. ಅಚ್ಚೇ ದಿನ ಬಂದಿಲ್ಲ. ಕಪ್ಪು ಹಣ ತಂದಿಲ್ಲವೆಂದು ಶ್ರೀಗಳು ಪ್ರಶ್ನಿಸಿದ್ದಾರೆ. ಸಮಾಜದ ಬಗ್ಗೆ ಕಾಳಜಿ ಇರುವುದರಿಂದ ಈ ಪ್ರಶ್ನೆ ಎತ್ತಿದ್ದಾರೆ. ಅವರೇನು ಸುಳ್ಳು ಹೇಳುತ್ತಿದ್ದಾರೆಯೇ ಅಂತಾ ಡಿಸೋಜ ಮರು ಪ್ರಶ್ನೆ ಹಾಕಿದ್ರು.
Advertisement