ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊಡ್ಡ ಅಕ್ರಮವಾಗಿದೆ. ಬಿಜೆಪಿ ಅವಧಿಯಲ್ಲಿ ಅಕ್ರಮ ಆಗಿದ್ದು, ತನಿಖೆ ಮಾಡಿಸುವಂತೆ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ (Nagaraj Yadav) ಆಗ್ರಹ ಮಾಡಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ ನಡೆದಿದೆ. ಸಚಿವರು ಜನವರಿಯಲ್ಲಿ ಸಭೆ ಮಾಡಿದ್ರು. ಅ ಸಭೆಯಲ್ಲಿ ಅಕ್ರಮ ಆಗಿದೆ ಅಂತ ಹೇಳಿದ್ದಾರೆ. ಇದಕ್ಕಾಗಿ ಒಂದು ಕಮಿಟಿ ರಚನೆ ಮಾಡೋದಾಗಿ ಹೇಳಿದ್ದಾರೆ. ಪ್ರತಿ ಸ್ಮಾರ್ಟ್ ಸಿಟಿಗೆ ಒಂದು ಸಾವಿರ ಕೋಟಿ ಹಣ ಖರ್ಚು ಮಾಡ್ತಾರೆ. ಈ ಯೋಜನೆಯಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ಸರ್ಕಾರ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿಯಲ್ಲಿ ಅಕ್ರಮವಾಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದರು. ಬಿಜೆಪಿ ಅವಧಿಯಲ್ಲಿ ಅಕ್ರಮವಾಗಿದೆ. ಈ ಬಗ್ಗೆ ತನಿಖೆ ಆಗಬೇಕು. ಅರ್ಧ ಗಂಟೆಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಕೇಳಿದರು. ಇದನ್ನೂ ಓದಿ: ನಿಮಗೂ ವಯಸ್ಸಾಗಿದೆ, ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ – ಖರ್ಗೆಗೆ ಕಾರಜೋಳ ಸವಾಲ್
ಇದಕ್ಕೆ ಸಚಿವ ಭೈರತಿ ಸುರೇಶ್ ಉತ್ತರ ನೀಡಿ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಯಾವುದೇ ಅಕ್ರಮವಾಗಿಲ್ಲ. 7 ನಗರಗಳ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ-ರಾಜ್ಯ ಸರ್ಕಾರದಿಂದ ಒಟ್ಟು 6854.5 ಕೋಟಿ ಬಿಡುಗಡೆ ಆಗಿದೆ. ಇದರಲ್ಲಿ 6472.08 ಕೋಟಿ ಖರ್ಚಾಗಿದೆ ಎಂದು ಲಿಖಿತ ಉತ್ತರ ಕೊಟ್ಟರು.
ಪ್ರಶ್ನೆ ಕೇಳಿದಾಗ ನಾಗರಾಜ್ ಯಾದವ್ ಏರುಧ್ವನಿಯಲ್ಲಿ ಮಾತಾಡುತ್ತಿದ್ದರಿಂದ, ಸಭಾಪತಿ ಮಾತನ್ನ ಕೇಳದ ಹಿನ್ನೆಲೆ ಸಚಿವರು ಉತ್ತರ ಕೊಡಲು ಬಿಡದೇ ಅರ್ಧ ಗಂಟೆ ಚರ್ಚೆಗೆ ಕೊಡೋದಾಗಿ ಸಭಾಪತಿಗಳು ತಿಳಿಸಿದರು. ಇದನ್ನೂ ಓದಿ: ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ – ಸುರೇಶ್ ಬಾಬು ಕಿಡಿ