ಹುಬ್ಬಳ್ಳಿ: ಬಿಜೆಪಿಯಲ್ಲಿ (BJP) ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ. ಅಲ್ಲದೇ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ (Pradeep Shettar) ಮೊದಲ ಬಾರಿಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ಲಿಂಗಾಯತ ನಾಯಕರನ್ನು ತುಳಿದಿದ್ದೇ ವಿಧಾನಸಭಾ ಚುನಾವಣೆಯ ಸೋಲಿಗೆ ಕಾರಣವಾಗಿದೆ. ಮಾಜಿ ಸಚಿವರಾದ ಮುನೇನಕೊಪ್ಪ, ಮಾಧುಸ್ವಾಮಿ, ರೇಣುಕಾಚಾರ್ಯ, ಮಾಜಿ ಶಾಸಕ ಚಿಕ್ಕನಗೌಡರ ಸೇರಿದಂತೆ ಅನೇಕ ಲಿಂಗಾಯತ ನಾಯಕರ ಒಂದು ಕಾಲು ಪಕ್ಷದಿಂದ ಹೊರಗಿದೆ ಎಂದಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ
ವಿಧಾನಪರಿಷತ್ ಸದಸ್ಯನಾಗಿದ್ದರೂ ನನ್ನನ್ನು ಕೆಲವು ಕಾರ್ಯಕ್ರಮಗಳಿಗೆ ಕಡೆಗಣಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮಕ್ಕೆ ನನ್ನನ್ನು ಕರೆದಿಲ್ಲ. ಇಂತಹ ನಾಲ್ಕೈದು ಕಾರ್ಯಕ್ರಮಗಳಲ್ಲಿ ಕಡೆಗಣನೆ ಮಾಡಿದ್ದಾರೆ. ಇದು ನನಗೆ ಬೇಸರ ತಂದಿದೆ. ಯಾಕೆ ಹೀಗೆ ಆಗುತ್ತಿದೆ ಎಂದು ಅರ್ಥ ಆಗುತ್ತಿಲ್ಲ. ಆದರೆ ವೀರಶೈವ ಲಿಂಗಾಯತ ನಾಯಕರಿಗೆ ನಾಯಕತ್ವ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ವೀರಶೈವ ಲಿಂಗಾಯತರಿಗೆ ಕೊಡಬೇಕು. ನಾನು ಪಕ್ಷ ಬಿಟ್ಟು ಹೋಗಲ್ಲ. ಆದರೆ ಈ ಎಲ್ಲಾ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್‍ನ ಅನೇಕ ದೊಡ್ಡ ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಈಗಾಗಲೇ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ಸಮಸ್ಯೆ ಆಗಿದೆ. ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಪಕ್ಷದಲ್ಲಿ ಲಿಂಗಾಯತ ನಾಯಕರೇ ಇಲ್ಲ. ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಇರುವ ಅಲ್ಪ ಸ್ವಲ್ಪ ಲಿಂಗಾಯತ ನಾಯಕರನ್ನು ಕೈಬಿಟ್ಟರೆ ಬಿಜೆಪಿ ಕೆಟ್ಟ ಸ್ಥಿತಿಗೆ ತಲುಪುತ್ತದೆ. ರಾಜ್ಯದ ಬಿಜೆಪಿ ಉಸ್ತುವಾರಿ ಬದಲಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಇನ್ನೂ 7-8 ತಿಂಗಳು ಸಮಯವಿದೆ: ಐಎನ್‌ಡಿಐಎ ವಿರುದ್ಧ ಹೆಚ್‌ಡಿಡಿ ಅಸಮಾಧಾನ
Web Stories