ಹಾವೇರಿ: ಚುನಾವಣೆಯಲ್ಲಿ (Election) ಟಿಕೆಟ್ ಕೊಡದಿದ್ದರೆ ನೂರಕ್ಕೆ ಲಕ್ಷ ಪರ್ಸೆಂಟ್ ಪಕ್ಷೇತರನಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ (MLC) ಆರ್.ಶಂಕರ್ (R.Shankar)) ಹೇಳಿದರು.
ವಾಣಿಜ್ಯ ತೆರಿಗೆ ಇಲಾಖೆಯ (Commercial Tax Department) ದಾಳಿ ಪ್ರಕರಣದ ಕುರಿತು ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರಿನಲ್ಲಿರುವ (Ranebennur) ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಣಿಜ್ಯ ತೆರಿಗೆ ಇಲಾಖೆಯವರು ಕಾನೂನಿನ ರೀತಿಯಲ್ಲಿ ಪರೀಕ್ಷೆ ಮಾಡಲಿ. ಅದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಇವರು ಏಕಾಏಕಿ ದಾಳಿ ಮಾಡಿದ್ದಾರೆ. ರಾಣೆಬೆನ್ನೂರಿಗೆ ಕಾಲು ಇಟ್ಟಾಗಿನಿಂದ ದಾನ ಧರ್ಮವನ್ನು ಮಾಡಿದ್ದೇನೆ. ನಾನು ದುಡಿದ ಆದಾಯದಲ್ಲಿ ಒಂದು ಭಾಗವನ್ನು ದಾನ ಧರ್ಮಕ್ಕಾಗಿ ಮೀಸಲಿಟ್ಟಿದ್ದೇನೆ. ಇದು ಹಿಂದಿನಿಂದಲೂ ಮಾಡುತ್ತಿದ್ದೇನೆ. ಅದು ಬಿಟ್ಟು ಚುನಾವಣೆ ಇದೆ ಎಂದು ಜನರಿಗೆ ಕೊಡುತ್ತಿಲ್ಲ. ಇಲ್ಲಿ ಹಗಲು ದರೋಡೆ ನಡೆದಿದೆ. ಅದರ ಬಗ್ಗೆ ಯಾರಿಗೂ ಕಣ್ಣು ಕಾಣುತ್ತಿಲ್ಲ. ರಾಜಕೀಯದಲ್ಲಿ (Politics) ಆರ್.ಶಂಕರ್ ಬೆಳೆಯಲೇಬಾರದು ಎಂಬ ಉದ್ದೇಶದಿಂದ ಈ ರೀತಿಯಾಗಿ ಮುಗಿಸಲು ಮುಂದಾಗಿದ್ದಾರೆ. ವಾಣಿಜ್ಯ ಇಲಾಖೆಯವರು ದಾಖಲೆಗಳನ್ನು ಕೇಳಿದ್ದಾರೆ. ಅದನ್ನು ನೀಡಿದ್ದೇನೆ. ಇದರ ಹಿಂದೆ ರಾಜಕೀಯ ವಿರೋಧಿಗಳ ಪಿತೂರಿಯಿದೆ ಎಂದರು. ಇದನ್ನೂ ಓದಿ: ಶಾಸಕ ಅಭಯ್ ಪಾಟೀಲ್‍ರಿಂದ ಶಾಲಾ ಮಕ್ಕಳಿಗೆ ಐಸ್‍ಕ್ರೀಂ ವಿತರಣೆ
Advertisement
Advertisement
ನಾನು ನನ್ನ ಹಣದಲ್ಲಿ ದಾನ ಮಾಡುತ್ತಿದ್ದೇನೆ. ಈ ಕುರಿತು ಯಾವ ದೇವರ ಮೇಲಾದರೂ ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಕೆಲವರಿಗೆ ರಾಜಕೀಯವೆಂದರೆ ಮೃಷ್ಠಾನ್ನವಾಗಿದೆ. ಆದರೆ ನನಗೆ ರಾಜಕೀಯ ಎಂಬುದು ಸೇವೆ. ಬಿಜೆಪಿ (BJP) ಪಕ್ಷಕ್ಕೆ ಬಂದವರಿಗೆ ಅತಿಥಿ ಸತ್ಕಾರ ಮಾಡಿದರು. ನಮಗೆ ಉಪವಾಸ ಕೆಡವಿದರು. ಇದಕ್ಕೆ ನಾನು ಕಣ್ಣೀರು ಹಾಕಿದ್ದೇನೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ
Advertisement
ಇನ್ನೂ ಕಾಲ ಮಿಂಚಿಲ್ಲ. ನಮ್ಮನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಿ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಪ್ರಚಾರ ಮಾಡಿದರು. ಮನುಷ್ಯನಿಗೆ ಎಷ್ಟು ಅನ್ಯಾಯ ಮಾಡುವುದು? ಹಂತ ಹಂತದಲ್ಲಿ ಚುಚ್ಚಿ ನನ್ನನ್ನು ಮಾನಸಿಕವಾಗಿ ಕೊಲೆ ಮಾಡಿದ್ದಾರೆ. ಇವರ ಜೊತೆ ಹೋಗಿದ್ದಕ್ಕೆ ಅನರ್ಹ ಎಂದು ಪಟ್ಟ ಕಟ್ಟಿದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ
Advertisement
ನನ್ನ ತಾಲೂಕಿನ ಜನತೆ ನನ್ನ ಬಲ. ನನಗೆ ಯಾವುದೇ ವೀಕ್ನೆಸ್ ಇಲ್ಲ. ನಾನು ಬಹಳ ಮುಕ್ತತೆ ಹಾಗೂ ತಾಳ್ಮೆಯಿಂದ ಇದ್ದೇನೆ. ನಮ್ಮಿಂದ ಸರ್ಕಾರ ಬಂದಿದೆ ಎನ್ನುವ ಮಾನವೀಯತೆ ಇದ್ದರೆ ಒಂದು ತಿಂಗಳು ಕಾಯುತ್ತೇನೆ. ನಾನು ದುಡ್ಡು ತೆಗೆದುಕೊಂಡು ಬಿಜೆಪಿಗೆ ಹೋಗಿದ್ದೇನೆ ಎಂದವರು ಬರಲಿ. ನನಗೆ ಹಣ ಕೊಟ್ಟವರೂ ಬರಲಿ. ಬಂದು ಧರ್ಮಸ್ಥಳ (Dharmasthala) ಮಂಜುನಾಥನ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್
ನನಗೆ ಯಾರು ಟಿಕೆಟ್ ಕೊಟ್ಟರೂ ಪರವಾಗಿಲ್ಲ. ಕೆಂಪೇಗೌಡರು ಕೆರೆ ಕಟ್ಟಿಸಿ ಸೊಸೆಯನ್ನು ಬಲಿ ಕೊಟ್ಟಹಾಗೆ ನನ್ನನ್ನು ಬಲಿ ಕೊಟ್ಟಿದ್ದಾರೆ. ಇದರಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಎಲ್ಲಾ ರಾಜಕೀಯ ವಿರೋಧಿಗಳ ಪಿತೂರಿ ಇದೆ. ಟಿಕೆಟ್ ಕೊಟ್ಟರೆ ಪಕ್ಷದಿಂದ, ಇಲ್ಲವಾದರೆ ನನ್ನ ಕ್ಷೇತ್ರದ ಜನರಂತೆ ಪಕ್ಷೇತರನಾಗಿ ಸರ್ಧೆ ಮಾಡುವುದು ಖಚಿತ ಎಂದರು. ಇದನ್ನೂ ಓದಿ: ವಕೀಲ, ಮಹಿಳೆ ಮಧ್ಯೆ ಬೀದಿ ಕಾಳಗ