ಬೆಂಗಳೂರು: ಮಾಜಿ ಸಚಿವ ಜಿ.ಟಿ.ದೇವೇಗೌಡರು ಜೆಡಿಎಸ್‍ನಿಂದ ದೂರ ಉಳಿದಿರುವ ಬೆನ್ನಲ್ಲೇ ಇದೀಗ ಜಿಡಿಎಸ್‍ಗೆ ಮತ್ತೊಂದು ಆಘಾತವಾಗಿದ್ದು, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು ಜೆಡಿಎಸ್‍ಗೆ ಗುಡ್ ಬೈ ಹೇಳುತ್ತಿದ್ದಾರೆ. ಅಲ್ಲದೆ ಬಿಜೆಪಿ ಸೇರುವುದಾಗಿ ಸಹ ಹೇಳಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮುನಿಸಿಕೊಂಡಿರುವ ಸಂದೇಶ್ ನಾಗರಾಜ್, ಸದ್ಯ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್ ನಿಂದ ಗೆದ್ದು ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯತ್ವದ ಅವಧಿ ಇದೇ ಡಿಸೆಂಬರ್ ಗೆ ಅಂತ್ಯವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಂದೇಶ್ ನಾಗರಾಜ್ ಒಲವು ತೋರಿದ್ದಾರೆ. ಇದನ್ನೂ ಓದಿ: ಟ್ರೆಂಡಿಂಗ್ ಆಯ್ತು ಬೆಂಗಳೂರು ಹೋಟೆಲಿನ ಐಸ್ ಕ್ಯಾಂಡಿ ಇಡ್ಲಿ
Advertisement
Advertisement
ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಕಚೇರಿಗೆ ಆಗಮಿಸಿದ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾರನ್ನು ಸಹ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ
Advertisement
ಬಿಜೆಪಿ ಕಚೇರಿಯಲ್ಲಿ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಹಾಗೂ ಬಿಜೆಪಿ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸಚಿವ ಬೈರತಿ ಬಸವರಾಜು ತಬ್ಬಿಕೊಂಡು ಮುದ್ದಾಡಿದ್ದಾರೆ. ಬಳಿಕ ಜೊತೆಯಲ್ಲೇ ನಿಂತು ಮೂವರು ಮಾಧ್ಯಮಗಳಿಗೆ ಪೋಸ್ ನೀಡಿದ್ದಾರೆ.
Advertisement
ಈ ವೇಳೆ ಮಾತನಾಡಿದ ಸಂದೇಶ್ ನಾಗರಾಜ್, ನಾನು ಬಿಜೆಪಿಗೆ ಬರುತ್ತೇನೆ, ಮತ್ತೆ ಮೂರನೇ ಬಾರಿ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆಯಿಂದ ಗೆದ್ದು ಬರುತ್ತೇನೆ. ಜನವರಿ 5ರ ತನಕ ಜೆಡಿಎಸ್ ಸದಸ್ಯನಾಗಿ ಇರುತ್ತೇನೆ. ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರ ಉಳಿದಿದ್ದೇನೆ. ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯಾಧ್ಯಕ್ಷರ ಭೇಟಿ ಮಾಡಬೇಕಿತ್ತು. ಇಬ್ಬರೂ ಸಿಗಲಿಲ್ಲ ಮುಂದಿನ ದಿನಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿ ಪಕ್ಷ ಸೇರುತ್ತೇನೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬರೋದು ಖಚಿತ. ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನಸ್ಸು ಮಾಡಬೇಕು ಎಂದರು.