ಮೈಸೂರು: ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಬಿಜೆಪಿಯವರ (BJP) ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು (Honeytrap) ನಡೆದಿವೆ. ಹೀಗಾಗಿಯೇ ಬಿಜೆಪಿ ಶಾಸಕರು, ಮಾಜಿ ಸಿಎಂ ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ನಾಯಕರ ಬಗ್ಗೆ ಮಾತನಾಡಲು ಏನು ಹಕ್ಕಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ – ಮೂವರು ಗಂಭೀರ
ಸಚಿವರ ಮನೆಗೆ ಸಿಸಿಟಿವಿ (CCTV) ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವರು ಹನಿಟ್ರ‍್ಯಾಪ್ ಮಾಡಲೆಂದೇ ಸಚಿವರ ಮನೆಗೆ ಬರುತ್ತಾರೆ. ಈಗಾಗಿ ಸಿಸಿಟಿವಿ ಹಾಕಿಸಬೇಕು. ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ಮನೆಗೆ ಸಿಸಿಟಿವಿ ಇದೆ. ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯವರ ಮನೆಯ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಡಲಾಚೆಯ ಗಣಿಗಾರಿಕೆ ಯೋಜನೆಗೆ ಕೇರಳದ ವಿರೋಧವೇಕೆ? – ಯೋಜನೆಯ ಮಹತ್ವವೇನು?
ಸಿಎಂ ಮನೆಗೆ ಪೊಲೀಸ್ ಬಂದೂಬಸ್ತ್ ಸಹ ಇದೆ, ಯಾರೇ ಬಂದರೂ ರೆಕಾರ್ಡ್ ಆಗುತ್ತೆ. ಸಚಿವರ ಮನೆಗೆ ಖಂಡಿತವಾಗಿ ಸಿಸಿಟಿವಿ ಹಾಕಬೇಕು. ಸಿಸಿಟಿವಿ ಇದ್ದರೇ ಹನಿ ಟ್ರ‍್ಯಾಪ್ ಮಾಡುವವರ ಮೇಲೆ ಕಣ್ಣಿಡಬಹುದು ಎಂದಿದ್ದಾರೆ. ಇನ್ನೂ ಸದನದಲ್ಲಿ ಕಾಂಗ್ರೆಸ್ ನಾಯಕರು ಯತ್ನಾಳಗೆ ಚೀಟಿ ಕೊಟ್ಟ ವಿಚಾರ ಕುರಿತು ಮಾತನಾಡಿ, ಚೀಟಿ ಕೊಟ್ಟಿದ್ದು ಯಾರು ಎಂಬುದು ಗೊತ್ತಿಲ್ಲ. ನಮ್ಮ ನಾಯಕರು ಸದನದಲ್ಲಿ ಮಾತನಾಡಿರೋದು ಮಾತ್ರ ಗೊತ್ತಿದೆ. ಅದರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಕೇಸ್ | `ಕೈʼ ನಾಯಕ ಭೂಪೇಶ್ ಬಘೇಲ್ ಮನೆ ಮೇಲೆ ಸಿಬಿಐ ದಾಳಿ
ಸಂವಿಧಾನ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಯತೀಂದ್ರ ಅವರು, ಬಿಜೆಪಿಯವರಿಗೆ ಏನು ವಿಷಯ ಇಲ್ಲ. ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಇಂಗ್ಲಿಷ್ ಅವರ ಮಾತೃ ಭಾಷೆ ಅಲ್ಲ. ಆದ್ದರಿಂದ ಅವರು ಹೇಳಬೇಕಾದ ವಿಚಾರ ಸರಿಯಾಗಿ ಹೇಳಲು ಆಗಿಲ್ಲ ಅಷ್ಟೆ. ಸಂವಿಧಾನ ರಕ್ಷಣೆ ಮಾಡಲು ಕಾಂಗ್ರೆಸ್ ಹೋರಾಟ ಮಾಡಿಕೊಂಡು ಬಂದಿದೆ. ನಾವು ಸಂವಿಧಾನ ಬದಲಾಯಿಸುವ ಪ್ರಯತ್ನ ಮಾಡಲ್ಲ. ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿ ಅವರು ಹೇಳಿಕೆ ಕೊಟ್ಟ ಮೇಲೆ ಸ್ಪಷ್ಟನೆ ಕೊಟ್ಟಿಲ್ಲ. ಅನಂತ್ ಕುಮಾರ್ ಹೆಗಡೆ ಹೇಳಿಕೆ ಕೊಟ್ಟ ನಂತರ ಸ್ಪಷ್ಟನೆ ಕೊಡುವ ಕೆಲಸ ಮಾಡಿಲ್ಲ. ಆದರೆ ಡಿಕೆಶಿ ಸ್ಪಷ್ಟನೆಕೊಟ್ಟಿದ್ದಾರೆ. ಆದ್ರೆ ಬಿಜೆಪಿಯವರಿಗೆ ಕೆಲಸ ಇಲ್ಲದೆ ಈ ರೀತಿ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.