ನವದೆಹಲಿ: ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಹೊಸ ಸಿಡಿಎಸ್ ನೇಮಕಗೊಳ್ಳ ಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಜನರಲ್ ಎಂಎಂ ನರಾವಣೆ ಅವರು ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರು ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ. ಇದನ್ನೂ ಓದಿ: ಸಿಎಂ ರ‍್ಯಾಲಿ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರ ದಬ್ಬಾಳಿಕೆ – ವೀಡಿಯೋ ವೈರಲ್
Advertisement
Advertisement
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?
Advertisement
ಈ ಹಿಂದೆಯೂ ಸಿಡಿಎಸ್ ನೇಮಕಕ್ಕೂ ಮುನ್ನ ಇದೇ ವ್ಯವಸ್ಥೆ ಅನುಸರಿಸಲಾಗುತ್ತಿತ್ತು.