ಕಲಬುರಗಿ: ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಉನ್ನತ ಶಿಕ್ಷಣ ಪದ್ಧತಿ ಅವನತಿಯತ್ತ ಸಾಗುತ್ತಿದೆ. ಈ ಕುರಿತು ಕೆಲವೊಂದು ದಿನಪತ್ರಿಕೆಗಳಲ್ಲಿ ವರದಿಗಳು ಪ್ರಕಟವಾಗಿದ್ದು ಉನ್ನತ ಶಿಕ್ಷಣದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿವೆ. ಖಾಲಿಯಾದ ಖಾಯಂ ಹುದ್ದೆಗಳ ಭರ್ತಿಗಾಗಿ ಈಗಾಗಲೇ ನಾನು ಸದನದಲ್ಲಿ ಸಂಭಂದಿಸಿದ ಸಚಿವರ ಗಮನ ಸೆಳೆದಿದ್ದೇನೆ ಎಂದು ಎಂಎಲ್‌ಸಿ ಶಶೀಲ್ ನಮೋಶಿ (Shashil Namoshi) ಹೇಳಿದರು.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅತಿ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು ಸರ್ಕಾರ ಬೋಧಕರ ಹುದ್ದೆಗಳ ನೇಮಕಾತಿಗೆ ಮನಸ್ಸು ಮಾಡದಿದ್ದರಿಂದ ಬಹುತೇಕ ವಿವಿಗಳಿಗೆ ಅತಿಥಿ ಉಪನ್ಯಾಸಕರೇ ಆಧಾರವಾಗಿದ್ದು, ಗುಣಮಟ್ಟದ ಶಿಕ್ಷಣದ ಪ್ರಶ್ನೆ ಕಾಡುತ್ತಿದೆ ಎಂದರು. ಇದನ್ನೂ ಓದಿ: ಬಜೆಟ್‌ಗೆ ಇನ್ನೆರಡು ತಿಂಗಳು ಬಾಕಿ – ಕಳೆದ ವರ್ಷದ ಬಜೆಟ್ ಹಣವನ್ನೇ ರಿಲೀಸ್ ಮಾಡದ ಸರ್ಕಾರ!
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ 12 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೋಧಕರ ಹುದ್ದೆಗಳು ಅತಿ ಹೆಚ್ಚು ಖಾಲಿ ಇದ್ದು ಸರ್ಕಾರ ಮಾತ್ರ ನೇಮಕಾತಿಗೆ ಮನಸ್ಸು ಮಾಡುತ್ತಿಲ್ಲ, ಇದರಿಂದ ವಿಶ್ವವಿದ್ಯಾಲಯಗಳಲ್ಲಿ ಬೋಧಕರಿಲ್ಲದೆ ಗುಣಮಟ್ಟದ ಶಿಕ್ಷಣಕ್ಕೆ ಪೆಟ್ಟು ಬೀಳುವಂತಾಗಿದೆ ಎಂದರು. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್
ಒಟ್ಟು 2,723 ಬೋಧಕ ಹುದ್ದೆಗಳು ಖಾಲಿ:
ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4,709 ಹುದ್ದೆಗಳು ಮಂಜೂರಾಗಿದ್ದರೆ, ಇದರಲ್ಲಿ 2,723 ಹುದ್ದೆಗಳು ಖಾಲಿ ಉಳಿದಿವೆ. ಪ್ರಸ್ತುತ ಎಲ್ಲ ವಿವಿಗಳಲ್ಲಿ ಕಾಯಂ ಕಾರ್ಯ ನಿರ್ವಹಿಸುವವರಿಗಿಂತ ಖಾಲಿ ಹುದ್ದೆಗಳು ಹೆಚ್ಚಿವೆ. ಈ ಹಿಂದೆ ನೇಮಕಗೊಂಡವರೂ ನಿವೃತ್ತಿಯಾಗಿದ್ದು ಕೆಲವರು ಮಾತ್ರ ಉಳಿದಿದ್ದು, ಇವರೂ ಕೆಲದೇ ವರ್ಷಗಳಲ್ಲಿ ನಿವೃತ್ತಿ ಆಗಲಿದ್ದಾರೆ ಎಂದರು.