– ಮಹಿಳೆಯರು ಸೇರಿ ನೂರಾರು ಗ್ರಾಮಸ್ಥರಿಂದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ (Belluru town) ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ನಡೆಸಿದ ಆರೋಪ ಕೇಳಿ ಬಂದಿದೆ.
Advertisement
ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯೇ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು ಬೆಳ್ಳೂರು ಪೊಲೀಸ್ ಠಾಣೆ (Belluru Police Station) ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Advertisement
Advertisement
Advertisement
ಏನಿದು ಘಟನೆ?
ಬೈಕ್ ಟಚ್ ಮಾಡಿಕೊಂಡು ಓವರ್‌ಟೇಕ್ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಶನಿವಾರ ಅಭಿಷೇಕ್ ಪ್ರಶ್ನೆ ಮಾಡಿದ್ದರು. ಅದೇ ದ್ವೇಷ ಮುಂದಿಟ್ಟುಕೊಂಡು ಇಂದು ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ.
ಅಷ್ಟೇ ಅಲ್ಲದೇ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತದಲ್ಲಿದ್ದೀವಾ? ಪಾಕಿಸ್ತಾನದಲ್ಲಿದ್ದೀವಾ ಎಂದು ಪ್ರಶ್ನಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಯುವಕರೇ ಈ ಕೃತ್ಯ ಎಸಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳ್ಳೂರು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಮಹಿಳೆಯರು ಸೇರಿದಂತೆ ಪೊಲೀಸ್ ಠಾಣೆ ಎದುರು ನೂರಾರು ಗ್ರಾಮಸ್ಥರ ಜಮಾವಣೆಗೊಂಡಿದ್ದಾರೆ. ಗ್ರಾಮಸ್ಥರ ಮನವಿ ಆಲಿಸಿದ ಡಿವೈಎಸ್‌ಪಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.