ಉಡುಪಿ: ಜಿಲ್ಲೆಯ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿನಿಯರು (Students) ಮಹಿಳೆಯರ ಶೌಚಾಲಯದಲ್ಲಿ (Toilet) ಮೊಬೈಲ್ ಕ್ಯಾಮೆರಾವನ್ನು ಇರಿಸಿ ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿರುವ ಘಟನೆ ನಡೆದಿತ್ತು. ಕಾಲೇಜು ಆಡಳಿತ ಮಂಡಳಿ ಆ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪೊಲೀಸರಿಗೆ ದೂರು ನೀಡದೇ ಇತ್ಯರ್ಥಗೊಳಿಸಲು ಮುಂದಾಗಿತ್ತು. ಆದರೆ ಈ ಬಗ್ಗೆ ಧ್ವನಿ ಎತ್ತಲು ಮುಂದಾಗಿದ್ದ ಯುವತಿಯೊಬ್ಬರಿಗೆ ಪೊಲೀಸರು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ಹಿಂದೂ ಯುವತಿಯರ ವೀಡಿಯೋ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಡನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ನಾಯಕಿ ರಶ್ಮಿ ಸಾಮಂತ್ ಟ್ವೀಟ್ ಮಾಡಿದ್ದರು. ನಾನು ಉಡುಪಿ ಮೂಲದವಳಾಗಿದ್ದು ಉಡುಪಿಯಲ್ಲಿ ನಡೆದ ಈ ಘಟನೆಯ ಬಗ್ಗೆ ಯಾರು ಮಾತನಾಡುತ್ತಿಲ್ಲ ಯಾಕೆ? ಎಂದು ಬೇಸರ ಹೊರಹಾಕಿದ್ದರು. ಮೂವರು ವಿದ್ಯಾರ್ಥಿನಿಯರು ಕಾಲೇಜು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇರಿಸಿದ್ದಾರೆ. ಹಿಂದೂ ಹುಡುಗಿಯರ ವೀಡಿಯೋ ಮಾಡಲು ಕ್ಯಾಮೆರಾ ಇರಿಸಿದ್ದಾರೆ. ಬಳಿಕ ವೀಡಿಯೋಗಳನ್ನು ತಮ್ಮ ಸಮುದಾಯದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
Advertisement
I’m from Udupi and nobody is talking about Alimatul Shaifa, Shabanaz and Aliya who placed cameras in female toilets of their college to record hundreds of unsuspecting Hindu girls. Videos and phots that were then circulated in community WhatsApp groups by the perpetrators.
— Rashmi Samant (@RashmiDVS) July 23, 2023
Advertisement
ಈ ಟ್ವೀಟ್ ಬಳಿಕ ವೈರಲ್ ಆಗಿದ್ದು, ಟ್ವೀಟ್‌ನ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಮಲ್ಪೆ ಮಣಿಪಾಲ ಪೊಲೀಸರು ಆಕೆಯ ಮನೆಗೆ ತೆರಳಿ ತಂದೆ ತಾಯಿಯ ವಿಚಾರಣೆ ನಡೆಸಿದ್ದಾರೆ. ಇದೀಗ ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಆಕೆಗೆ ಹಾಗೂ ಆಕೆಯ ಪೋಷಕರಿಗೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅನುಚಿತ ವರ್ತನೆ ತೋರಿದ್ದೇ ಮುಳುವಾಯ್ತಾ? – ಹರ್ಮನ್‌ಪ್ರೀತ್ ಕೌರ್‌ಗೆ ನಿಷೇಧದ ಭೀತಿ
Advertisement
ಘಟನೆಯೇನು?
ಉಡುಪಿ (Udupi) ಖಾಸಗಿ ನೇತ್ರ ಕಾಲೇಜಿನ (College) ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅನ್ನು ಅಡಗಿಸಿಟ್ಟು ಮೂವರು ವಿದ್ಯಾರ್ಥಿನಿಯರು ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಶೂಟ್ ಮಾಡಿದ್ದರು. ಈ ಕೃತ್ಯ ಅರಿವಿಗೆ ಬರುತ್ತಲೇ ಹಿಂದೂ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದರು. ವೀಡಿಯೋ ಶೂಟ್ ಮಾಡಿದ್ದ ಮೂವರು ವಿದ್ಯಾರ್ಥಿನಿಯರ ಜೊತೆ ಕಾಲೇಜಿನಲ್ಲಿ ವಾಗ್ವಾದ ಮಾಡಿದ್ದರು. ಬಳಿಕ ಮಧ್ಯ ಪ್ರವೇಶಿಸಿದ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿನಿಯರ ಮೇಲೆ ಕ್ರಮ ತೆಗೆದುಕೊಂಡು ಕಾಲೇಜಿನಿಂದ ಅಮಾನತು ಮಾಡಿದೆ.
Advertisement
ಮಹಿಳೆಯರ ಶೌಚಾಲಯದಲ್ಲಿ ವೀಡಿಯೋ ಶೂಟ್ ಮಾಡಿದ ವಿಚಾರ ಬೆಳಕಿಗೆ ಬರುತ್ತಲೇ ಹಿಂದೂ ಸಂಘಟನೆಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿವೆ. ಈ ವಿಚಾರವಾಗಿ ಪ್ರಕರಣ ದಾಖಲಿಸುವಂತೆ ಕಾಲೇಜು ಆಡಳಿತ ಮಂಡಳಿಯನ್ನು ಒತ್ತಾಯಿಸಿವೆ. ಆದರೆ ಇದುವರೆಗೂ ಕಾಲೇಜು ಆಡಳಿತ ಮಂಡಳಿ ಪ್ರಕರಣವನ್ನು ದಾಖಲಿಸಿಲ್ಲ. ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ – ಸಿಎಂ ಎಚ್ಚರಿಕೆ
Web Stories