ಮೈಸೂರು: ಸಾಮಾನ್ಯವಾಗಿ ಮೊಬೈಲ್ ಕಳೆದು ಹೋದರೆ ಪೊಲೀಸ್ ಠಾಣೆಗೆ ದೂರು ನೀಡುವುದನ್ನು ನೋಡಿದ್ದೇವೆ. ಆದರೆ ವ್ಯಕ್ತಿಯೊಬ್ಬರು ಕಳುವಾದ ಮೊಬೈಲ್ ಹುಡುಕಿಸಿಕೊಡುವಂತೆ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕುಂದನಹಳ್ಳಿಯಲ್ಲಿ ನಡೆದಿದೆ. ಇದನ್ನೂ ಓದಿ: ಸಿಧು ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ: ಹರೀಶ್ ರಾವತ್
ಗ್ರಾಮದ ಜನತಾ ಬಡಾವಣೆ ನಿವಾಸಿ ಶಿವಣ್ಣ ಸಿಎಂಗೆ ಪತ್ರ ಬರೆದವರು. ಆಗಸ್ಟ್ 28 ರಂದು ಗ್ರಾಮಾಂತರ ಬಸ್ ನಿಲ್ದಾಣದಿಂದ ವುಡ್ ಲ್ಯಾಂಡ್ಸ್ ಚಿತ್ರಮಂದಿರದ ಕಡೆ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಮೊಬೈಲ್ ಕಿತ್ತುಕೊಂಡು ಹೋಗಿದ್ದಾನೆ. ಬಳಿಕ ಈ ಕುರಿತಂತೆ ತಾನು ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
Advertisement
Advertisement
ಈ ಸಂಬಂಧ ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ. ಸದ್ಯ ಈ ಸುದ್ದಿ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಬೆಂಗ್ಳೂರು ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Advertisement
Advertisement