ಬೆಂಗಳೂರು/ನೆಲಮಂಗಲ: ಮೊಬೈಲ್ ಕಳ್ಳತನ (Mobile Thief) ಮಾಡುತ್ತಿದ್ದವನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆಯಲ್ಲಿ ನಡೆದಿದೆ.
Advertisement
ಸುಮಾರು ದಿನಗಳಿಂದ ದಾಬಸ್ ಪೇಟೆ (Dabas Pete)ಬಸ್ ನಿಲ್ದಾಣದಲ್ಲಿ, ಆಟೋ ನಿಲ್ದಾಣದಲ್ಲಿ ಜನ ಸಂದಣಿ ಹೆಚ್ಚಾದ ಸಂದರ್ಭದಲ್ಲಿ ಬಸ್ಸಿಗೆ ಹತ್ತುವಾಗ ಪ್ರಯಾಣಿಕನಂತೆ ಬಂದು ತನ್ನ ಕೈ ಚಳಕ ತೋರಿಸಿ ಮೊಬೈಲ್ ಎಗರಿಸಿ ಎಸ್ಕೇಪ್ ಆಗುತ್ತಿದ್ದ ಕಳ್ಳನೋರ್ವನನ್ನು ಸಾರ್ವಜನಿಕರೇ ಹಿಡಿದು ಥಳಿಸಿ ದಾಬಸ್ ಪೇಟೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದನ್ನೂ ಓದಿ: ದಶಪಥ ಹೆದ್ದಾರಿ ಅವೈಜ್ಞಾನಿಕ ಗಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು
Advertisement
Advertisement
ಪ್ರಯಾಣಿಕರ ಮೊಬೈಲ್ ಕದ್ದು ಓಡುತ್ತಿದ್ದ ಆಸಾಮಿ, ಇಂದು ಅವನ ಬ್ಯಾಡ್ ಲಕ್ ಮೊಬೈಲ್ ಕದಿಯುವುದಕ್ಕೆ ಹೋಗಿ ದಾಬಸ್ ಪೇಟೆಯ ಮಧುಗಿರಿ ಪಾವಗಡ ಕಡೆ ತೆರಳುವ ಬಸ್‍ಗಳ ನಿಲ್ದಾಣದಲ್ಲಿ ಸಾರ್ವಜನಿಕರ ಕೈಗೆ ತಗಲಾಕಿ ಕೊಂಡಿದ್ದಾನೆ. ತಕ್ಷಣ ಆತನನ್ನು ಹಿಡಿದ ಸಾರ್ವಜನಿಕರು ಚೆನ್ನಾಗಿ ಬಾರಿಸಿ ಕೈ, ಕಾಲುಗಳನ್ನು ಹಿಡಿದು ಎತ್ತುಕೊಂಡು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಲ್ಲದೇ ಬಸ್ ನಿಲ್ದಾಣ, ಸಾರ್ವಜನಿಕರ ಪ್ರದೇಶಗಳಲ್ಲಿ ಪೊಲೀಸರು ಸರಿಯಾಗಿ ಗಸ್ತು ಮಾಡುತ್ತಿಲ್ಲವೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ