ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿಯವರಿಗೆ (Narendra Modi) ಕಣ್ಣಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ಕಣ್ಣು ಕಿವಿ ಎರಡೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಅನುದಾನ ಹಂಚಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ ಅನುದಾನ ನೀಡಿಲ್ಲ. ಕೃಷಿ, ನೀರಾವರಿಗೆ ನೀಡಲು ಉದ್ದೇಶಿಸಿದ್ದ ಅನುದಾನವನ್ನೂ ಘೋಷಿಸಿಲ್ಲ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಆಡಳಿತದಲ್ಲಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್’ ಟೀಕೆಗೆ ರಾಹುಲ್ ಗಾಂಧಿ ಕಿಡಿ
Advertisement
Advertisement
ಇನ್ನು ದೇಶದಲ್ಲೇ ಅತಿಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ತೆರಿಗೆ ಸಂಗ್ರಹದಲ್ಲಿ ಅತಿಹೆಚ್ವು ಪಾಲಿರುವ ನಮಗೆ ಅನುದಾನದ ವಿಚಾರದಲ್ಲಿ ಮೋಸ ಆಗಿದೆ. ಆದ್ದರಿಂದ ನಮ್ಮ ಪಾಲು ನಮಗೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಲು ರಾಜ್ಯದ ಶಾಸಕರು ಸಚಿವರು ದೆಹಲಿಗೆ ತೆರಳುತ್ತಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ರಾಜ್ಯ ಸಚಿವ ಸಂಪುಟದ ಸಚಿವರಾದಿಯಾಗಿ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಸಚಿವರು, ಶಾಸಕರು ಒಟ್ಟಾರೆಯಾಗಿ ದೆಹಲಿಗೆ ತೆರಳಿ ದೆಹಲಿಯಲ್ಲಿ ರಾಜ್ಯದ ಪರ ದ್ವನಿ ಎತ್ತಲಿದ್ದೇವೆ. ರಾಜ್ಯದ ಸಂಸದರಿಗೆ, ನಾಯಕರಿಗೆ ಮಾನ ಮರ್ಯಾದೆ ಇಲ್ಲ. ನಮ್ಮ ಪಾಲು ತೆರಿಗೆ ಹಣವನ್ನು ನಮಗೆ ಕೊಡುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು
Advertisement
Advertisement
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸಹ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ, ನಮ್ಮ ಪಾಲು ಕೇಳಲು ದೆಹಲಿಗೆ ತೆರಳುತ್ತಿದ್ದೇವೆ ಎಂದರು. ಸಚಿವರಾದ ಶಿವರಾಜ್ ತಂಗಡಗಿ, ಚಲುವರಾಯಸ್ವಾಮಿ, ಕೆ.ಹೆಚ್.ಮುನಿಯಪ್ಪ, ಜಮೀರ್, ಆರ್.ವಿ.ತಿಮ್ಮಾಪುರ, ನಾಗೇಂದ್ರ, ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದರು. ಅಲ್ಲದೇ ಶಾಸಕರಾದ ಹ್ಯಾರೀಸ್, ಕೊತ್ತನೂರು ಮಂಜು, ಪ್ರದೀಪ್ ಈಶ್ವರ್, ಶಿವಲಿಂಗೇಗೌಡ, ದರ್ಶನ್ ಪುಟ್ಟಣ್ಣಯ್ಯ ಹೀಗೆ ಅನೇಕ ಸಚಿವರು, ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ