ಬೆಂಗಳೂರು: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸಲಾಗುತ್ತಿದೆ. ಕನ್ನಡ ಸಾಧಕರ ಭಾವಚಿತ್ರಗಳನ್ನಿಟ್ಟು ಹಲವು ಕನ್ನಡ ಗೀತೆಗಳನ್ನು ಮೇಳೈಸುವ ಮೂಲಕ ಜನ ಸಂಭ್ರಮಿಸುತ್ತಿದ್ದಾರೆ. ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023
Advertisement
ಟ್ವಿಟ್ಟರ್ ಎಕ್ಸ್ ಖಾತೆಯಲ್ಲಿ ಶುಭ ಹಾರೈಸಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: 90 ಲಕ್ಷ ಕರೆಂಟ್ ಬಿಲ್, 50 ಲಕ್ಷ ಆಸ್ತಿ ತೆರಿಗೆ ಬಾಕಿ- ಆರ್ಥಿಕ ಸಂಕಷ್ಟದಲ್ಲಿದ್ಯಾ ಹಂಪಿ ಕನ್ನಡ ವಿವಿ?
Advertisement
ಭಾಷೆ ಎಂದರೆ ಅಸ್ಮಿತೆ, ಭಾಷೆ ಎಂದರೆ ಬದುಕು.
ಭಾಷೆಯನ್ನು ಉಳಿಸುವುದು ಎಂದರೆ ಬಳಸುವುದೇ ಆಗಿದೆ. ಈ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು ಎಂದು ಮನವಿ ಮಾಡುತ್ತೇನೆ.
ಕನ್ನಡ ರಾಜ್ಯೋತ್ಸವ ಕನ್ನಡಿಗರ ಬಾಳಿನ ನಿತ್ಯೋತ್ಸವವಾಗಲಿ.
ಸಮಸ್ತ ಕನ್ನಡಿಗರಿಗೂ ೬೮ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.… pic.twitter.com/OolLKkN0Ep
— CM of Karnataka (@CMofKarnataka) November 1, 2023
Advertisement
ಕನ್ನಡ ಪ್ರತಿ ಮನೆಯ ಆಡು ಭಾಷೆಯಾಗಲಿ: ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಅವರೂ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷ ನಾಯಕರನ್ನು ಪ್ರಾಂಕ್ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ
Advertisement
ಹೆಚ್.ಡಿ ಕುಮಾರಸ್ವಾಮಿ: ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ 50 ವರ್ಷ ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ. ಇದನ್ನೂ ಓದಿ: ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ
Web Stories