ನವದೆಹಲಿ: ಕೊರೊನಾ ವೈರಸ್ ರೂಪಾಂತರ ತಳಿ “ಓಮಿಕ್ರಾನ್” ಬಗ್ಗೆ ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.
Advertisement
ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧಗಳನ್ನು ಸಡಿಲಗೊಳಿಸುವ ಯೋಜನೆಗಳ ಬಗ್ಗೆ ಪರಾಮರ್ಶಿಸಿ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?
Advertisement
ಹೊಸ ತಳಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಪ್ರಧಾನಿ ಸಂಕ್ಷಿಪ್ತವಾಗಿ ತಿಳಿಸಿದರು. ಹೊರದೇಶಗಳಿಂದ ಆಗಮಿಸುವವರ ಬಗ್ಗೆ ಮೇಲ್ವಿಚಾರಣೆಯ ಅಗತ್ಯತೆ ಕುರಿತು ಹೇಳಿದರು. ಹೊಸ ತಳಿ ಹರಡುವಿಕೆ ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಿ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.
Advertisement
Advertisement
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಆಗಾಗ ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವಂತಹ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಕ್ರಮಕೈಗೊಳ್ಳಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ
ಹೊಸ ತಳಿ ಪತ್ತೆಯಾಗಿರುವ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸುವ ವಿಮಾನ ಸಂಚಾರಕ್ಕೆ ಈಗಾಗಲೇ ನಿರ್ಬಂಧ ವಿಧಿಸಲಾಗಿದೆ. “ಓಮಿಕ್ರಾನ್” ಹೊಸ ತಳಿಯು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದೆ. ನಂತರ ಬೋಸ್ಟ್‌ವಾನಾ, ಇಸ್ರೇಲ್, ಹಾಂಗ್‌ಕಾಂಗ್‌ನಲ್ಲೂ ಪ್ರಕರಣಗಳು ಪತ್ತೆಯಾಗಿವೆ.