ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರದಲ್ಲಿ ಮೋದಿ ಕುಟುಂಬದ ಸದಸ್ಯರೆಲ್ಲರೂ ಭಾಗಿಯಾಗಿದ್ದಾರೆ. ಮೋದಿ ಸಹೋದರರು ಹೀರಾಬೆನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
#WATCH | Gujarat: Heeraben Modi, mother of PM Modi, laid to rest in Gandhinagar. She passed away at the age of 100, today.
(Source: DD) pic.twitter.com/wqjixwB9o7
— ANI (@ANI) December 30, 2022
Advertisement
ಮೋದಿ ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಪ್ರಧಾನಿ ಅಹಮದಾಬಾದ್ಗೆ ತೆರಳಿದ್ದರು. ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪ್ರಧಾನಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಹೆಗಲು ಕೊಟ್ಟಿದ್ದಾರೆ. ಇದನ್ನೂ ಓದಿ: ಎರಡು ಬಾರಿ ಮಾತ್ರ ಮಗನ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಹೀರಾಬೆನ್!
Advertisement
Advertisement
ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥಿವ ಶರೀರ ಅಂತಿಮ ಯಾತ್ರೆ ಹೊರಡಲಾಗಿತ್ತು. ಇಂದು ಬೆಳಗ್ಗೆ 9:30ರ ವೇಳೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆದಿದೆ. ಹೀರಾಬೆನ್ ಚಿತೆಗೆ ಮೋದಿ ಸಹೋದರರು ಅಗ್ನಿಸ್ಪರ್ಶ ಮಾಡಿದ್ದಾರೆ.