– ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ.
Advertisement
ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್
Advertisement
Advertisement
ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.
Advertisement
ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.