ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಭಾನುವಾರ ಕೊನೆಯದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
Advertisement
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು. ಇದನ್ನೂ ಓದಿ: ಕಿಚ್ಚ ಸುದೀಪ್ ಕಿಚ್ಚು ಕಾಂಗ್ರೆಸ್ ಕಚೇರಿಯನ್ನೇ ಸುಟ್ಟು ಹಾಕ್ತಿದೆ: ಪ್ರತಾಪ್ ಸಿಂಹ
Advertisement
Advertisement
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು. ಇದನ್ನೂ ಓದಿ: ಹೆಣ್ಣು ಹೆತ್ತ ಪೋಷಕರಿಗೆ The Kerala Story ಚಿತ್ರ ನೋಡುವಂತೆ ಕಲ್ಲಡ್ಕ ಪ್ರಭಾಕರ್ ಸಲಹೆ