ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್(91) ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಎನ್‍ಡಿಎ ನಾಯಕರು ಸಹ ಸಾಥ್ ನೀಡಿ ತಮ್ಮ ಶಕ್ತಿ ಪ್ರದರ್ಶನವನ್ನು ತೋರಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ನಾಮಪತ್ರವನ್ನು ಜಿಲ್ಲಾಧಿಕಾರಿ ಮುಂದೆ ಓದಿ ನಂತರ ಸಹಿ ಹಾಕಿ ಸಲ್ಲಿಕೆ ಮಾಡಿದರು.
ಮೋದಿ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸುಷ್ಮ ಸ್ವರಾಜ್ ಎನ್‍ಡಿಎ ನಾಯಕರಾದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಜೆಡಿಯು ನಾಯಕ ಬಿಹಾರ ಸಿಎಂ ನಿತೀಶ್ ಕುಮಾರ್, ಎಐಎಡಿಎಂಕೆ ನಾಯಕರಾದ ಓ ಪನ್ನೀರ್ ಸೆಲ್ವಂ ಮತ್ತು ತಂಬಿದೊರೈ, ಲೋಕ ಜನಶಕ್ತಿ ಪಕ್ಷದ ರಾಮ್ ವಿಲಾಸ್ ಪಾಸ್ವನ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
#WATCH: PM Narendra Modi files nomination from Varanasi parliamentary constituency. #LokSabhaElections2019 pic.twitter.com/ym9x2gCYYG
— ANI UP/Uttarakhand (@ANINewsUP) April 26, 2019
ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮೋದಿ, ಕಾಶಿಯ ಜನತೆ ನನ್ನ ಮೇಲೆ ತೋರಿಸಿದ ಪ್ರೀತಿಗೆ ನಾನು ಚಿರಋಣಿ. ಮತ್ತೆ 5 ವರ್ಷ ಆಡಳಿತ ನಡೆಸಲು ಕಾಶಿಯ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಕಾಶಿಯಲ್ಲಿ ಮಾತ್ರ ಇಷ್ಟೊಂದು ದೊಡ್ಡ ರೋಡ್ ಶೋ ನಡೆಯಲು ಸಾಧ್ಯ ಎಂದು ಹೇಳಿದರು.
#WATCH: PM Narendra Modi meets NDA leaders at Collectorate office ahead of filing his nomination from Varanasi parliamentary constituency. pic.twitter.com/xVfO9kovHP
— ANI UP/Uttarakhand (@ANINewsUP) April 26, 2019