ನವದೆಹಲಿ: ಕೇಂದ್ರ ಸರ್ಕಾರ (Government Of India) ಜಾರಿಗೆ ತರಲು ಮುಂದಾಗಿರುವ ಉದ್ದೇಶಿತ ಡೇಟಾ ಸಂರಕ್ಷಣಾ ಕಾನೂನಿನಲ್ಲಿ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಕೇಂದ್ರ ತಂತ್ರಜ್ಞಾನ ಮತ್ತು ಐಟಿ (IT) ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಸ್ಪಷ್ಟಪಡಿಸಿದ್ದಾರೆ.
ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ-2022ರ ಕರಡನ್ನು (Data Protection Draft) ಬಿಡುಗಡೆಗೊಳಿಸಿರುವ ಕುರಿತಾಗಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರಮೋದಿ (Narendra Modi) ಸರ್ಕಾರದಿಂದ ನಾಗರಿಕರ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ. ಆದರೆ ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ ಮತ್ತು ನೈಸರ್ಗಿಕ ವಿಕೋಪಗಳಂತಹ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಸರ್ಕಾರ ವೈಯಕ್ತಿಕ ಡೇಟಾಗಳನ್ನು (Personal Data) ಪರಿಶೀಲಿಸುತ್ತದೆ ಎಂದು ಹೇಳಿರುವುದಾಗಿ ವರದಿಯಾಗಿದೆ.
Advertisement
Advertisement
ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ ಹಾಗೂ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಮಾತ್ರ ವೈಯಕ್ತಿಕ ಡೇಟಾವನ್ನು ಪರಿಶೀಲಿಸುತ್ತದೆ. ಇದು ಅಪರಾಧವಲ್ಲ. ವಾಕ್ ಸ್ವಾತಂತ್ರ‍್ಯವೆಂಬುದು ಸಂಪೂರ್ಣವಲ್ಲ ಅದು ಸಹ ಕೆಲ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ಹಾಗೆಯೇ ಡೇಟಾ ರಕ್ಷಣೆಯ ಹಕ್ಕು ಕೂಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಡೇಟಾ ಸಂರಕ್ಷಣೆ – ನಿಯಮ ಉಲ್ಲಂಘಿಸಿದ್ರೆ 500 ಕೋಟಿವರೆಗೂ ಬೀಳುತ್ತೆ ದಂಡ
Advertisement
Seeking your views on draft Digital Personal Data Protection Bill, 2022.
Link below: https://t.co/8KfrwBnoF0
— Ashwini Vaishnaw (@AshwiniVaishnaw) November 18, 2022
Advertisement
ಇದೇ ತಿಂಗಳ ನವೆಂಬರ್ 18ರಂದು ಕೇಂದ್ರ ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು, ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ -2022ರ ಕರಡನ್ನು ಬಿಡುಗಡೆಗೊಳಿಸಿದ್ದಾರೆ. ಡಿಸೆಂಬರ್ 17ರ ವರೆಗೆ ಸಾರ್ವಜನಿಕರು ಅಭಿಪ್ರಾಯ ನೀಡಬಹುದಾಗಿದೆ. ಇದನ್ನೂ ಓದಿ: ಬೆಂಗ್ಳೂರು ಬಳಿ ಟಾಟಾ ಐಫೋನ್ ಉತ್ಪಾದನಾ ಘಟಕ – 60 ಸಾವಿರ ಮಂದಿಗೆ ಉದ್ಯೋಗ
ಅಂಶಗಳೇನಿದೆ?
ದೂರಸಂಪರ್ಕ ಮಸೂದೆ-2022 ಮತ್ತು 2000ರ ಪರಿಷ್ಕೃತ ಐಟಿ ಕಾಯ್ದೆಯು (IT Act) ಈ ವೈಯಕ್ತಿಕ ಡೇಟಾ ಸಂರಕ್ಷಣೆಗೆ ಕಾನೂನು ಅಡಿಪಾಯ ಹಾಕಿಕೊಡುತ್ತದೆ. ಪ್ರತಿಯೊಬ್ಬರ ವೈಯಕ್ತಿಕ ಡೇಟಾಗಳನ್ನು ಸಂರಕ್ಷಿಸಲು, ವ್ಯಕ್ತಿಯ ಹಕ್ಕು ಹಾಗೂ ಕಾನೂನು ಬದ್ಧ ಉದ್ದೇಶಗಳನ್ನು ಈಡೇರಿಸಲು ಇದು ಶಾಸನ ಬದ್ಧ ಕ್ರಮವಾಗಿದ್ದು, ಅದಕ್ಕಾಗಿ ಭಾರತೀಯ ಡೇಟಾ ಸಂರಕ್ಷಣಾ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಲಾಗುತ್ತದೆ.
ಡೇಟಾಗಳಿಗೆ ಭದ್ರತಾ ಕ್ರಮಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ್ರೆ ಅಥವಾ ಲೋಪಗಳು ಕಂಡುಬAದಲ್ಲಿ ಅಂತಹ ಸಂಸ್ಥೆಗಳಿಗೆ 25 ಲಕ್ಷ ರೂ.ವರೆಗೆ ದಂಡ ವಿಧಿಸುವ ಅಂಶವನ್ನು ಸೇರಿಸಲಾಗಿದೆ. ಈ ಹಿಂದೆ 500 ಕೋಟಿ ವರೆಗೆ ದಂಡ ವಿಧಿಸಬಹುದಾಗಿದೆ ಎನ್ನುವ ಅಂಶವನ್ನು ಉಲ್ಲೇಖಿಸಲಾಗಿತ್ತು.
ಈ ಹಿಂದೆ 2018ರಲ್ಲಿ ಸಂಸತ್ತಿನಲ್ಲಿ ಡೇಟಾ ಸಂರಕ್ಷಣಾ ಮಸೂದೆ ಮಂಡನೆಯಾಗಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಹೊಸ ಕರಡನ್ನು ಬಿಡುಗಡೆ ಮಾಡಲಾಗಿದೆ.