-ಮಿಲಾದ್ ಉನ್ ನಬಿ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಡಬಾರದು ಎಂದ ಶಾಸಕ
ಬೆಂಗಳೂರು: ಜಿಎಸ್‌ಟಿ (GST) ಸರಳೀಕರಣ ಮಾಡಿ ಮೋದಿ ಸರ್ಕಾರ (Modi Government) ದೇಶದ ಜನರಿಗೆ ಮೋದಿ ಸರ್ಕಾರ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ ಎಂದು ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ (Mahesh Tenginakai) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೋದಿ ಅವರು ಬಡವರು, ಮಧ್ಯಮವರ್ಗದ ಪರ ಇರುವವರು. ಹೀಗಾಗಿ ದಸರಾ, ದೀಪಾವಳಿಗೆ ದೇಶದ ಜನರಿಗೆ ಕಾಣಿಕೆ ಕೊಟ್ಟಿದ್ದಾರೆ. ಜಿಎಸ್‌ಟಿಯಲ್ಲಿ ಬದಲಾವಣೆ ತರುವ ಮೂಲಕ ಜನರಿಗೆ ಸಹಕಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ ಹರ್ಷ
ಕ್ಯಾನ್ಸರ್ ಔಷಧಿಗಳ ಮೇಲೆ ಟ್ಯಾಕ್ಸ್ ರದ್ದು ಮಾಡಿದ್ದಾರೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಜಿಎಸ್‌ಟಿ ಇಳಿಸುವ ಕೆಲಸ ಮಾಡಿ, ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್, ಮೋದಿ ಅವರಿಗೆ ಧನ್ಯವಾದ ಹೇಳ್ತೀನಿ. ಜನರ ಪರವಾಗಿ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.
ಇದೇ ವೇಳೆ ಅರಮನೆ ಮೈದಾನದಲ್ಲಿ ಆಯೋಜನೆ ಆಗಿರುವ ಮಿಲಾದ್ ಉನ್ ನಬಿ ಕಾರ್ಯಕ್ರಮಕ್ಕೆ ಸರ್ಕಾರ ಅವಕಾಶ ಕೊಡಬಾರದು. ಕಾಂಗ್ರೆಸ್ ಸರ್ಕಾರ (Congress) ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುತ್ತಿದೆ. ಬೆಂಗಳೂರಿಗೆ ಟೂರಿಸಂ ವೀಸಾ ಪಡೆದು ಧರ್ಮ ಪ್ರಚಾರ ಮಾಡುವ ಕೆಲಸ ಆಗ್ತಿದೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು. ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕೇಸ್ ಸೇರಿ ಅನೇಕ ಕೇಸ್‌ಗಳು ನಡೆಯುತ್ತಿರುವ ಸಮಯದಲ್ಲಿ ಈ ಕಾರ್ಯಕ್ರಮಕ್ಕೆ ಅವಕಾಶ ಕೊಡೋದು ಸರಿಯಲ್ಲ. ವಿದೇಶದಿಂದ ಬರೋರಿಗೆ ಧರ್ಮ ಭಾಷಣಕ್ಕೆ ಅನುಮತಿ ಕೊಡಬಾರದು. ಸಿಎಂ ಅವರು ಆಯೋಜಕರಿಗೆ ಹೇಳಿದ್ದೇನೆ ಎಂದಿದ್ದಾರೆ. ಆದರೆ ನಾಳೆ ನಿಮ್ಮ ಇಂಟಲಿಜೆನ್ಸ್ ಅಲ್ಲೇ ಇರುತ್ತದೆ. ಒಂದು ವೇಳೆ ಏನಾದರೂ ಅವರು ಧರ್ಮ ಪ್ರಚಾರ ಮಾಡಿ ಮಾತಾಡಿದರೆ, ಅವರ ಮೇಲೆ ಕೂಡಲೇ ಎಫ್‌ಐಆರ್ ದಾಖಲು ಮಾಡ್ತಾರಾ ಎಂದು ಸಿಎಂ ಹೇಳಬೇಕು ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ – ಚುನಾವಣಾ ಆಯೋಗದ ಮೂಲಗಳ ಹೇಳಿಕೆ