ನವದೆಹಲಿ: ನೀವು ಹೊಸ ಕಾರು ಖರೀದಿಸಿ ಫೇಸ್ ಬುಕ್‍ಗೆ ಫೋಟೋ ಹಾಕ್ತೀರಾ. ಹಾಗಾದ್ರೆ ಮುಂದಿನ ದಿನಗಳಲ್ಲಿ ನಿಮ್ಮ ಮನೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಂದರೆ ಅಚ್ಚರಿಯಿಲ್ಲ.
ಹೌದು. ಕಪ್ಪು ಕುಳಗಳನ್ನು ಮಣಿಸಲು ನೋಟ್ ನಿಷೇಧ ಕೈಗೊಂಡ ಮೋದಿ ಸರ್ಕಾರ ಈಗ ಆದಾಯ ತೆರಿಗೆಯನ್ನು ಕಟ್ಟದೇ ಶೋಕಿ ಮಾಡೋ ಕುಳಗಳನ್ನು ಹಿಡಿಯಲು ಪ್ಲಾನ್ ಮಾಡಿದೆ.
Advertisement
ಇಲ್ಲಿಯವರೆಗೆ ಆದಾಯ ತೆರಿಗೆ ಇಲಾಖೆ ಬ್ಯಾಂಕ್ ಮೂಲಗಳನ್ನು ಮಾತ್ರ ಪರಿಶೀಲನೆ ನಡೆಸಿ ತೆರಿಗೆ ವಂಚಿಸುತ್ತಿದ್ದ ಕುಳಗಳನ್ನು ಪತ್ತೆ ಹಚ್ಚುತಿತ್ತು. ಈಗ ಇವುಗಳ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಶೋಕಿ ಮಾಡು ಮಂದಿಯನ್ನು ಪತ್ತೆ ಹಚ್ಚಲು ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಸಾಮಾಜಿಕ ಜಾಲತಾಣದಲ್ಲಿ ಹೇಗೆ?
ನೀವು ಎಲ್ಲಿ ಹೋಗಿದ್ದೀರಿ..? ಎಷ್ಟು ಖರ್ಚು ಮಾಡಿದ್ದೀರಿ..? ಏನು ಖರೀದಿ ಮಾಡಿದ್ದೀರಿ ಎನ್ನುವ ಮಾಹಿತಿ ಸಂಗ್ರಹಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ರೂಪಿಸಿದ್ದು ಆಗಸ್ಟ್ ನಿಂದ ಕಾರ್ಯಾರಂಭ ಮಾಡಲಿದೆ. ಒಂದು ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು ಫೇಸ್‍ಬುಕ್, ಇನ್‍ಸ್ಟಾ ಗ್ರಾಮ್‍ನಿಂದ ಫೋಟೋ, ವಿಡಿಯೋಗಳ ಮಾಹಿತಿಯನ್ನು ಮಾಹಿತಿಯನ್ನು ಸಂಗ್ರಹಿಸಲಿದೆ.
Advertisement
ಕಾರ್ಯಾಚರಣೆ ಹೀಗೆ ಇರುತ್ತೆ:
ಮೊದಲ ಹಂತದಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ, ಆಸ್ತಿ ಮತ್ತು ಸ್ಟಾಕ್ ಗಳಲ್ಲಿ ಹೂಡಿಕೆ, ಹಣವನ್ನು ಖರ್ಚು ಮಾಡಿದ್ದು ಮತ್ತು ಠೇವಣಿ ಇಟ್ಟ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಎರಡನೇ ಹಂತ ಡಿಸೆಂಬರ್ ನಿಂದ ಆರಂಭವಾಗಲಿದ್ದು, ತೆರಿಗೆಯನ್ನು ವಂಚಿಸಿ ವ್ಯವಹಾರ ನಡೆಸುತ್ತಾರೋ ಅವರ ಮಾಹಿತಿಯನ್ನು ಸಂಗ್ರಹಿಸಲು ವೈಯಕ್ತಿಕ ಪ್ರೊಫೈಲ್ ಕ್ರಿಯೆಟ್ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಫೇಸ್ ಬುಕ್, ಇನ್ ಸ್ಟಾಗ್ರಾಮ್ ನಲ್ಲಿ ಹಾಕಿರುವ ಕಾರುಗಳು, ವಿದೇಶ ಪ್ರವಾಸದ ಫೋಟೋ, ಶಾಪಿಂಗ್ ಫೋಟೋ ಇತ್ಯಾದಿ. ಎಲ್ಲ ಮಾಹಿತಿ ಸಂಗ್ರಹಿಸಿದ ಬಳಿಕ 2018ರ ಮೇ ತಿಂಗಳಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನೇರವಾಗಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.
Advertisement
ನವೆಂಬರ್ 8ರಂದು ನೋಟ್ ಬ್ಯಾನ್ ಮಾಡಿದ ಬಳಿಕ ಡಿಸೆಂಬರ್ 31 ರಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿಗೂ ಅಧಿಕ ಮಂದಿ ಕಳೆದ ವರ್ಷ ವಿದೇಶ ಪ್ರವಾಸವನ್ನು ಕೈಗೊಂಡಿದ್ದಾರೆ. ಆದರೆ ಕೇವಲ 32 ಲಕ್ಷ ಮಂದಿ ಮಾತ್ರ ತಮ್ಮ ಬಳಿಕ 10 ಲಕ್ಷಕ್ಕೂ ಹೆಚ್ಚು ಅಧಿಕ ಆದಾಯವಿದೆ ಎಂದು ಘೋಷಿಸಿದ್ದಾರೆ. ಹೀಗಾಗಿ ತೆರಿಗೆ ವಂಚಿಸುವ ಜನರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಮೋದಿ ಎಚ್ಚರಿಕೆ ನೀಡಿದ್ದರು.