ಬೆಂಗಳೂರು: ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಶಿಷ್ಠಾಚಾರದ ಅನ್ವಯ ಸ್ವಾಗತ ಕೋರಿದ್ರು. ರಾಜ್ಯಪಾಲ ವಜುಭಾಯಿ ವಾಲಾ ಕೂಡ ಮೋದಿಗೆ ಸ್ವಾಗತ ಕೋರಿದ್ರು. ಬಳಿಕ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ರು. ಮೋದಿ ಆಗಮನಕ್ಕೆ ಕಾಯುತ್ತಿದ್ದ ನೂರಾರು ಅಭಿಮಾನಿಗಳು ಮೋದಿ ಆಗಮಿಸ್ತಿದ್ದಂತೆ ಜಯಘೋಷ ಕೂಗಿದರು. ಮೋದಿ ವಿಮಾನ ನಿಲ್ದಾಣದಿಂದ ನಿರ್ಗಮಿಸ್ತಿದ್ದಂತೆ ಸಿಎಂ ಕೂಡ ತೆರಳಲು ವಿಮಾನ ನಿಲ್ದಾಣದಿಂದ ಹೊರ ಬಂದರು. ಆಗಲೂ ಎಲ್ಲರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.
Advertisement
ಮೋದಿ ವೇಳಾಪಟ್ಟಿ:
* ಬೆಳಗ್ಗೆ 8.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ
* ಬೆಳಗ್ಗೆ 10.30ಕ್ಕೆ ಲಲಿತ್ ಮಹಲ್ ಹೆಲಿಪ್ಯಾಡ್‍ನಿಂದ ಶ್ರವಣಬೆಳಗೊಳಕ್ಕೆ ಪ್ರಯಾಣ
* ಬೆಳಗ್ಗೆ 10.30ರಿಂದ ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕದಲ್ಲಿ ಭಾಗಿ
* ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿನ ಮಹಾರಾಜ ಹೆಲಿಪ್ಯಾಡ್‍ಗೆ ಆಗಮನ
* ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮನ
* ರೈಲು ನಿಲ್ದಾಣದಿಂದಲೇ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
* 3.45ಕ್ಕೆ ಮಹಾರಾಜ ಮೈದಾನಕ್ಕೆ ರಸ್ತೆ ಮಾರ್ಗವಾಗಿ ಆಗಮನ
* 4 ಗಂಟೆಗೆ ಮಹಾರಾಜ ಕಾಲೇಜಿನಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ
* 5 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
* ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ನಿರ್ಗಮನ