ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಮುಸ್ಲಿಂ ಸಮುದಾಯದ ನೆಚ್ಚಿನ ಪ್ರಧಾನಿ ಅಭ್ಯರ್ಥಿಯೆಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಸೈಯದ್ ಷಹನವಾಸ್ ಹುಸೇನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ನರೇಂದ್ರ ಮೋದಿಯವರನ್ನೇ ನೆಚ್ಚಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ಸ್ವೀಕರಿಸಿದ್ದಾರೆ. ಮುಸ್ಲಿಂ ಸಮುದಾಯ ಹಾಗೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿಯವರ ಮೇಲಿಟ್ಟಿರುವ ನಂಬಿಕೆಯೇ ಇದಕ್ಕೆ ಕಾರಣ. ಮುಸ್ಲಿಂ ಸಮುದಾಯದಲ್ಲಿ ಮೋದಿಯವರ ಮೇಲಿನ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Advertisement
Advertisement
ದೇಶದ ಪ್ರಧಾನಿಯಾಗಿರುವ ಮೋದಿಯವರು 132 ಕೋಟಿ ಜನರನ್ನು ಭಾರತೀಯರೆಂಬ ದೃಷ್ಟಿಕೋನದಿಂದ ನೋಡುತ್ತಾರೆ. ಆದರೆ ಇತರೆ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ನೋಡುತ್ತವೆ. ಈಗಾಗಲೇ ಈ ಬಗ್ಗೆ ಮುಸ್ಲಿಂ ಸಮುದಾಯ ಸೇರಿದಂತೆ ಭಾರತೀಯರಿಗೂ ಅರ್ಥವಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿಯವರು ಎಲ್ಲರ ಅಚ್ಚು-ಮೆಚ್ಚಿನ ನಾಯಕ ಎಂದು ತಿಳಿಸಿದರು.
Advertisement
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿರುವುದು ಹಾಗೂ ಬಡತನದ ಸುಳಿಯಲ್ಲಿ ಸಿಲುಕಲು ಕಾಂಗ್ರೆಸ್ಸೇ ನೇರ ಕಾರಣ. ಇಂದು ಪ್ರಧಾನಿ ಮೋದಿಯವರು ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಜಾರಿಗೆ ತಂದ ತ್ರಿವಳಿ ತಲಾಖ್ ರದ್ದು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv