ನವದೆಹಲಿ: ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ. ತಮ್ಮ ಚುನಾವಣಾ ಭಾಷಣದಲ್ಲಿ 431 ಬಾರಿ ಅವರು ಮಂದಿರ – ಮಸೀದಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಕಳೆದ 15 ದಿನಗಳ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ 232 ಬಾರಿ ಉಲ್ಲೇಖಿಸಿದ್ದಾರೆ. 573 ಬಾರಿ ಇಂಡಿಯಾ ಮೈತ್ರಿಕೂಟದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಒಂದು ದಿನವೂ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.
ಏಳನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ ಹಿನ್ನೆಲೆ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಚುನಾವಣೆ ಬಹು ವರ್ಷಗಳವರೆಗೆ ನೆನಪಿನಲ್ಲಿ ಇರಲಿದೆ. ಸಂವಿಧಾನ ಉಳಿಸಲು ಜನರೇ ಚುನಾವಣೆ ಮಾಡಿದ್ದಾರೆ. ಬಿಜೆಪಿಯ ವಿಭಜನಕಾರಿ ಪ್ರಚಾರವನ್ನು ಜನರು ಒಪ್ಪಿಲ್ಲ. ನಾವು ಜನರ ವಿಷಯಗಳ ಕುರಿತು ಪ್ರಚಾರ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಇಂಡಿಯಾ ಒಕ್ಕೂಟದ ನಾಯಕರಿಗೂ ಧನ್ಯವಾದ ತಿಳಿಸುತ್ತೇವೆ ಎಂದರು. ಇದನ್ನೂ ಓದಿ: ಸರ್ಕಾರ ನಾಶ ಮಾಡೋದಕ್ಕೆ ನನ್ನ, ಸಿಎಂ ಮೇಲೆ ಶತ್ರು ಭೈರವಿ ಯಾಗ ಮಾಡಿಸ್ತಿದ್ದಾರೆ: ಡಿಕೆಶಿ ಬಾಂಬ್
Advertisement
Advertisement
ಪ್ರತಿಪಕ್ಷಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಅವರು, ಜನರ ಸಮಸ್ಯೆಗಳ ಬಗ್ಗೆ ಒಂದು ದಿನವೂ ಮಾತನಾಡಲಿಲ್ಲ. ಚುನಾವಣೆಗೂ ಮುನ್ನವೇ ನಮ್ಮ ಪಕ್ಷದ ಬ್ಯಾಂಕ್ ಖಾತೆ ಬಂದ್ ಮಾಡಿದರು. ಈ ಹಿಂದೆ ಯಾವ ಸರ್ಕಾರವೂ ಈ ರೀತಿ ಮಾಡಿರಲಿಲ್ಲ. ವಿರೋಧ ಪಕ್ಷಗಳನ್ನು ಹೀಗೆ ನಡೆಸಿಕೊಂಡಿರಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಪ್ರಜ್ವಲ್
Advertisement
Advertisement
ಪ್ರಧಾನಿ ಮೋದಿ ಚುನಾವಣಾ ಪ್ರಚಾರವನ್ನು ಗಮನಿಸಿದ್ದೀರಿ. ಮೋದಿ ತನ್ನನ್ನು ತಾನು ದೇವರು ಎಂದು ಹೇಳಿಕೊಂಡಿದ್ದಾರೆ. ಜೂನ್ 4ರಂದು ಜನರು ಹೊಸ ಸರ್ಕಾರವನ್ನು ಚುನಾಯಿಸಲಿದ್ದಾರೆ. ಇಂಡಿಯಾ ಒಕ್ಕೂಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಎಲ್ಲರನ್ನು ಒಳಗೊಳ್ಳುವ ಸರ್ಕಾರ ಮಾಡಲಿದ್ದೇವೆ. ಪ್ರಧಾನಿ ಯಾರು ಆಗಬೇಕು ಎನ್ನುವುದನ್ನು ಬಳಿಕ ಎಲ್ಲರೂ ಸೇರಿ ನಿರ್ಧಾರ ಮಾಡಲಿದ್ದೇವೆ. ಜೂನ್ 1 ರಂದು ಸಾಮಾನ್ಯ ಸಭೆ ನಡೆಸುತ್ತಿದ್ದು, ಫಲಿತಾಂಶ ದಿನದ ತಯಾರಿ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡಿಯೂರಿ ವೃದ್ಧೆ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವೀಡಿಯೋ ವೈರಲ್