ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ರಸ್ತೆಗೆ ಸಗಣಿ ನೀರು ಹಾಕಿ ಸ್ವಚ್ಛ

Public TV
1 Min Read
mysuru congress

ಮೈಸೂರು: ಮೋದಿ ರೋಡ್ ಶೋ (Modi Road Show) ಮಾಡಿದ್ದ ಮೈಸೂರಿನ (Mysuru) ರಸ್ತೆಗೆ ಕಾಂಗ್ರೆಸ್‌ ಕಾರ್ಯಕರ್ತರು ಸಗಣಿ ನೀರು ಹಾಕಿ ಸ್ವಚ್ಛ ಮಾಡಿದ ಘಟನೆ ನಡೆದಿದೆ.

ಚುನಾವಣೆ ಮೊದಲು ಮೈಸೂರಿನ ರಾಜಮಾರ್ಗದಲ್ಲಿ ಮೋದಿ ಭರ್ಜರಿ ರೋಡ್‌ ಶೋ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಗಣಿ ನೀರು ಹಾಕಿ ಸ್ವಚ್ಛಗೊಳಿಸುವ ಮೂಲಕ ಬಿಜೆಪಿಗೆ ವ್ಯಂಗ್ಯ ಮಾಡಿದೆ.

ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ ಮಾತನಾಡಿ, ಚುನಾವಣೆಗೂ ಮುನ್ನ ಮೈಸೂರಿನ ರಾಜ ಮಾರ್ಗದಲ್ಲಿ ಭರ್ಜರಿ ರೋಡ್ ಶೋ ಮೋದಿ ನಡೆಸಿದ್ದರು. ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು. ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇವೇಗೌಡರು ನಮ್ಮ ತಂದೆ ಆಗಿದ್ರೆ ಕೂತಿದ್ದ ಕಡೆ ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ: ಚಲುವರಾಯಸ್ವಾಮಿ

ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆಗಳಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರೇಳುವ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ಹಾಗೇ ರೋಡ್ ಶೋ ಮಾಡಿದ್ದಾರೆ. ಹಾಗಾಗಿಯೇ ಮೈಸೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಿದೆ. ಈ ರಸ್ತೆಯ ಕರ್ಮವನ್ನ ತೊಳೆಯೋದಕ್ಕೆ ಸಗಣಿ ನೀರಾಕಿ ಸ್ವಚ್ಛ ಮಾಡುತ್ತಿದ್ದೇವೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ?

Share This Article