LatestMain PostNational

ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – 4 ಉಗ್ರರ ಹತ್ಯೆ

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಇನ್ನೆರಡು ದಿನಗಳಲ್ಲಿ ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಶುಕ್ರವಾರ ನಸುಕಿನ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರೊಬ್ಬರು ಹುತಾತ್ಮನಾಗಿದ್ದು, 9ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ

ಗುರುವಾರ ರಾತ್ರಿ ಪ್ರಾರಂಭವಾದ ದಾಳಿಯಲ್ಲಿ ಸಿಐಎಸ್‌ಎಫ್ ಸಹಾಯಕ ಸಬ್‌ಇನ್ಸ್ಪೆಕ್ಟರ್ ಸೆರಿದಂತೆ ಐವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಭಯೋತ್ಪಾದಕರು ಶುಕ್ರವಾರ ನಸುಕಿನ ವೇಳೆ ಬ್ಯಾರೆಲ್ ಗ್ರೆನೇಡ್ ಲಾಂಚರ್‌ನಿಂದ(ಯುಬಿಜಿಎಲ್) ಗ್ರೆನೇಡ್ ಎಸೆದಿದ್ದು, ಈ ವೇಳೆ 5 ಮಂದಿ ಗಾಯಗೊಂಡಿದ್ದಾರೆ.

ಮೋದಿ ಭೇಟಿ:
ಪ್ರಧಾನಿ ನರೇಂದ್ರ ಮೋದಿ ಸಾಂಬಾ ಜಿಲ್ಲೆಗೆ ಭೇಟಿ ನೀಡಲಿರುವ ಎರಡು ದಿನಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭಯೋತ್ಪಾದಕ ದಾಳಿಗಳು ನಡೆಯುತ್ತಿದೆ. ಏಪ್ರಿಲ್ 24 ರಂದು ಮೋದಿ ಜಮ್ಮುವಿಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ನನ್ನ ಸ್ನೇಹಿತನನ್ನು ಭೇಟಿಯಾಗಲಿದ್ದೇನೆ – ಮೋದಿ ಭೇಟಿಗೂ ಮುನ್ನ ಬ್ರಿಟೀಷ್ ಪ್ರಧಾನಿ

MODI 2

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು(ಏಪ್ರಿಲ್ 24) ಮೋದಿ ಜಮ್ಮುವಿನಿಂದ 17 ಕಿ.ಮೀ ದೂರದಲ್ಲಿರುವ ಪಾಲಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published.

Back to top button